ಚನ್ನರಾಯಪಟ್ಟಣ : ಹಾಸನ ಜಿಲ್ಲೆಯಲ್ಲಿ ಹಾಡಹಗಲೇ ರೌಡಿಶೀಟರ್‌ನ ಬರ್ಬರ ಹತ್ಯೆಯಾಗಿದೆ.

ನಡುರಸ್ತೆಯಲ್ಲಿ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ನನ್ನು ದುಷ್ಕರ್ಮಿಗಳು ಕೊಂದು ಹಾಕಿದ್ದಾರೆ. ಮಾಸ್ತಿಗೌಡ (30) ಕೊಲೆಯಾದ ರೌಡಿಶೀಟರ್, ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಧನಲಕ್ಷ್ಮೀ ಚಿತ್ರಮಂದಿರದ ಮುಂಭಾಗ ಈ ಘಟನೆ ನಡೆದಿದೆ.

ಇನ್ನೋವಾ ಕಾರಿನಲ್ಲಿ ಬಂದ ನಾಲ್ಕೈದು ಯುವವರು ಈ ಕೃತ್ಯ ಎಸಗಿದ್ದಾರೆಂಬ ಆರೋಪವಿದೆ.ಮಾಸ್ತಿಗೌಡ ,ಚನ್ನರಾಯಪಟ್ಟಣ ತಾಲ್ಲೂಕಿನ ಹೊನ್ನಮಾರನಹಳ್ಳಿ ಗ್ರಾಮದವನಾಗಿದ್ದಾನೆ.

ಹಲವು ಕೃತ್ಯಗಳಲ್ಲಿ ಈತನ ಹೆಸರಿದ್ದು, ರೌಡಿಶೀಟರ್ ಆಗಿದ್ದ. ಮಧ್ಯ ಪೇಟೆಯಲ್ಲಿ ನಡೆದ ಬರ್ಬರ ಹತ್ಯೆಯಿಂದ ಚನ್ನರಾಯಪಟ್ಟಣ ಜನತೆ ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *