ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಲೀಟರ್ ನಂದಿನಿ ಹಾಲಿನ ದರವನ್ನು 5 ರೂ.ಏರಿಕೆ ಮಾಡಬೇಕು ಎಂದು ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಹೌದು, ಕೆಎಂಎಫ್ ಕೇಂದ್ರ ಕಚೇರಿಯಲ್ಲಿ ನಿನ್ನೆ ಸಭೆ ನಡೆಸಿರುವ ಹಾಲು ಒಕ್ಕೂಟಗಳು, ನಂದಿನಿ ಹಾಲಿನ ದರ ಪರಿಷ್ಕರಣೆಗೆ 14 ಹಾಲಿನ ಒಕ್ಕೂಟಗಳು ಪಟ್ಟು ಹಿಡಿದಿದ್ದು, ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ.

ಜುಲೈ 11 ರಂದು ನಂದಿನಿ ಹಾಲಿನ ದರವನ್ನು ಏರಿಸಲು ರಾಜ್ಯ ಸರ್ಕಾರದ ಮುಂದೆ ಬೇಡಿಕೆ ಸಲ್ಲಿಸಿರುವ ಕರ್ನಾಟಕ ಹಾಲು ಮಹಾಮಂಡಳದ ಆಡಳಿತ ಮಂಡಳಿ ಈ ಕುರಿತು ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚಿಸಿ ಅಂತಿಮ ನಿರ್ಧಾರ ಪ್ರಕಟಿಸಲಿದೆ ಎನ್ನಲಾಗಿದೆ.ನಂದಿನಿ ಹಾಲಿನ ದರ 5 ರೂಪಾಯಿ ಏರಿಸಲು ರಾಜ್ಯ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದೇವೆ, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಹೇಳಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲಾ ಹಾಲು ಒಕ್ಕೂಟಗಳು ನಂದಿನಿ ಹಾಲಿನ ದರವನ್ನು ಲೀಟರ್ಗೆ 5 ರೂ. ಹೆಚ್ಚಿಸುವಂತೆ ಹಿಂದೆಯೇ ಬೇಡಿಕೆ ಇಟ್ಟಿವೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ” ಎಂದರು.ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಹಾಲಿನ ದರ ಹೆಚ್ಚಳಕ್ಕೆ ವಿವಿಧ ಹಾಲು ಒಕ್ಕೂಟಗಳಿಂದ ಕೆಎಂಎಫ್ ಮೇಲೆ ತೀವ್ರ ಒತ್ತಡವಿದ್ದು, ಈ ಹಿನ್ನೆಲೆ ಸರ್ಕಾರ ಹಾಲಿನ ದರ ಹೆಚ್ಚಳಕ್ಕೆ ನಿರ್ಧರಿಸಿದೆ ಎನ್ನಲಾಗಿದೆ. ಈ ಮೂಲಕ ಗ್ರಾಹಕರಿಗೆ ಹಾಲಿನ ದರ ಏರಿಕೆಯ ಬಿಸಿ ತಟ್ಟಲಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *