ಸಕಲೇಶಪುರ: ಡಾ.ಬಿ.ಆರ್.ಅಂಬೇಡ್ಕರ್ ಅವರ 132 ನೇ ಜನ್ಮ ದಿನಾಚರಣೆಯನ್ನು ತಾಲೂಕು ಆಡಳಿತದ ವತಿಯಿಂದ ಮಿನಿವಿಧಾನಸೌದಲ್ಲಿ ಸರಳವಾಗಿ ಆಚರಿಸಲಾಯಿತು.ಮೊದಲಿಗೆ ಮಿನಿವಿಧಾನಸೌದದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ತಾಲೂಕು ಆಡಳಿತದ ವತಿಯಿಂದ ಮಾಲಾರ್ಪಣೆ ಮಾಡಲಾಯಿತು. ನಂತರ ನಡೆದ ಕಾರ್ಯಕ್ರಮಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಆನಂದ್ ಮೂರ್ತಿ ಮಾತನಾಡಿ ಪ್ರಪಂಚದಲ್ಲೆ ಅತ್ಯುನ್ನತವಾದ ಎಲ್ಲಾ ವರ್ಗದ ಜನರಿಗೆ ಸಂವಿಧಾನ ಕೊಟ್ಟಂತಹ ಅಂಬೇಡ್ಕರ್ ಅವರನ್ನು ಇಂದು ಒಂದು ಜಾತಿಗೆ ಸೀಮಿತಗೊಳಿಸಲಾಗಿದೆ ಈ ಭಾವನೆಗಳನ್ನು ಇಂದು ನಾವುಗಳು ಹೋಗಲಾಡಿಸಬೇಕಾಗಿದೆ ಅಂಬೇಡ್ಕರ್ ಒಬ್ಬರನ್ನೇ ಅಲ್ಲ ಈ ಸಮಾಜದ ಉದ್ದಾರಕ್ಕಾಗಿ ಶ್ರಮಿಸಿದ ಎಲ್ಲಾ ದಾರ್ಶನಿರನ್ನೂ ಕೂಡ ಒಂದೊಂದು ಜಾತಿಗೆ ಸೀಮಿತಗೊಳಿಸಿರುವುದು ದುರಂತ ಎಂದರು. ಡಿವೈಎಸ್ಪಿ ಮಿತುನ್ ಮಾತನಾಡಿ ಪ್ರತಿಯೊಬ್ಬ ಭಾರತೀಯ ಪ್ರಜೆಯೂ ಕೂಡ ಅಂಬೇಡ್ಕರ್ ಅವರ ವಿಚಸರಗಳು, ಕೊಡುಗೆಗಳು, ಹಾಗೂ ಅವರ ತತ್ವಸಿದ್ದಾಂತಗಳನ್ನು ಪಾಲಿಸುವ ಮೂಲಕ ಪ್ರಜಾತಂತ್ರ ಮೌಲ್ಯಗಳನ್ನು ಗೌರವಿಸುವ ಮತ್ತು ಎತ್ತಿಹಿಡಿಯುವ ಕರ್ತವ್ಯವನ್ನು ಮಾಡಬೇಕು ಎಂದರು. ಈ ಸಂದರ್ಭದಲ್ಲಿ ಚುನಾವಣಾಧಿಕಾರಿ ಹಾಗೂ ಉಪವಿಭಾಗಾದಿಕಾರಿ ಅನ್ಮೋಲ್ ಜೈನ್, ತಹಸೀಲ್ದಾರ್ ಮೇಘನಾ, ತಾಲೂಕು ಪಂಚಾಯಿತಿ ಇಓ, ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *