ಸಕಲೇಶಪುರ.ಸಿದ್ದರಾಮಯ್ಯ ಅವರ ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ ಪಂಚ ಯೋಜನೆಗಳ ಅನುಷ್ಠಾನಕ್ಕಾಗಿ ಈ ವರ್ಷ ಆರ್ಥಿಕ ಮಿತಿಗಳ ಮಧ್ಯೆಯೂ ಹಣ ಮೀಸಲಿಟ್ಟು ನುಡಿದಂತೆ ನಡೆದಿದೆ.

ಅಲ್ಪಸಂಖ್ಯಾತ ಸಮುದಾಯಗಳನ್ನು ತಲುಪುವ ಯತ್ನವನ್ನು ಸಿದ್ದರಾಮಯ್ಯನವರ ಬಜೆಟ್ ಮಾಡಿದೆ.

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ನೀಡುವುದನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿತ್ತು ಅದನ್ನು ರಾಜ್ಯ ಸರ್ಕಾರದಿಂದಲೇ ವಿತರಿಸುವ ಘೋಷಣೆ ಮಾಡಿದೆ ಇದಕ್ಕಾಗಿ 60 ಕೋಟಿ ಮೀಸಲಿಡಲಾಗಿದೆ .

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಿಂದುಳಿದ ವರ್ಗ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಪೂರಕವಾಗಿ ಹಲವು ಕಾರ್ಯಕ್ರಮಗಳನ್ನು ಘೋಷಿಸಿದೆ. ಬಡಜನರಲ್ಲಿ ಭರವಸೆಯ ಬೆಳಕು ಮೂಡಿದೆ ಎಂದು ಅಲ್ಪಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಫಾರೂಕ್ ಸಕಲೇಶಪುರ ಸಂತಸ ವ್ಯಕ್ತಪಡಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *