ಆಲೂರು ತಾಲ್ಲೂಕಿನ ಕಾರ್ಜುವಳ್ಳಿ ಗ್ರಾಮದ ಮುಜರಾಯಿ ಇಲಾಖೆಗೆ ಸೇರಿದ ಕಲ್ಲೇಶ್ವರ ದೇವಾಲಯ ಮಳೆ ಗಾಳಿಗೆ ಸಂಪೂರ್ಣ ಹಾಳಾಗಿದ್ದು ಈ ಸಂದರ್ಭದಲ್ಲಿ ಮಡಬಲು ಗ್ರಾಮ ಪಂಚಾಯಿತಿ ಪ್ರದೀಪ್ ಮಾತನಾಡಿ ಒಂದು ವಾರದಿಂದ ತಾಲೂಕಿನಾದ್ಯಂತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಗ್ರಾಮದ ಕಲ್ಲೇಶ್ವರ ದೇವಸ್ಥಾನವು ಗಾಳಿ ಮಳೆಯಿಂದ ಸಂಪೂರ್ಣವಾಗಿ ಹಾಳಾಗಿದೆ.

ಇದಕ್ಕೆ ಸಂಬಂಧಪಟ್ಟ ಮುಜರಾಯಿ ಇಲಾಖೆ ಅಧಿಕಾರಿಗಳು ಭೇಟಿ ನೀಡದೆ ನಿರ್ಲಕ್ಷ ವಹಿಸಿದ್ದಾರೆ ಎಂದು ಗ್ರಾಮಸ್ಥರ ಪರವಾಗಿ ಮಾತನಾಡಿದರು.

ಈಗಲಾದರೂ ಎಚ್ಚೆತ್ತುಕೊಂಡು ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಲಿ ಎಂಬುದು ಕಾರ್ಜುವಳ್ಳಿ ಗ್ರಾಮಸ್ಥರ ಆಗ್ರಹವಾಗಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *