ನಾಡ ಪ್ರಭು ಶ್ರೀ ಕೆಂಪೇಗೌಡರ 514 ನೇ ಜಯಂತಿಯನ್ನು ಹೊಳೆನರಸೀಪುರ ತಾಲ್ಲೂಕು ಆಡಳಿತದ ವತಿಯಿಂದ ಅದ್ದೂರಿಯಾಗಿ ಸಂಭ್ರಮ ಸಡಗರದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕೆಂಪೇಗೌಡರ ಭಾವ ಚಿತ್ರವನ್ನು ಬೆಳ್ಳಿ ರಥದಲ್ಲಿ ಇರಿಸಿ ವಿವಿಧ ಜಾನಪದ ಕಲಾ ತಂಡಗಳ ಸಾತ್ ನೊಂದಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು.

ಮಹಾ ಗಣಪತಿ ಪೆಂಡಾಲಿನಲ್ಲಿ ಸಮಾರೋಪ ಸಮಾರಂಭವನ್ನು ಶಾಸಕರ ಹೆಚ್.ಡಿ.ರೇವಣ್ಣನವರ ಅಧ್ಯಕ್ಷತೆಯಲ್ಲಿ ಆಯೋಜನೆ ಮಾಡಲಾಗಿತ್ತು.

ಮೆರವಣಿಗೆಗೂ ಮುನ್ನ ಬೆಳಿಗ್ಗೆ ಪೇಟೆ ಮುಖ್ಯ ರಸ್ತೆಯಲ್ಲಿರುವ ಚೆನ್ನಾಂಬಿಕ ವೃತ್ತದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಶಾಸಕರು ಪುಷ್ಪ ನಮನವನ್ನು ಸಲ್ಲಿಸುವ ಮೂಲಕ ಗೌರವವನ್ನು ಸಮರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಆರ್.ಬಿ.ಪುಟ್ಟೇಗೌಡ, ಸುದರ್ಶನ್ ಬಾಬು. ಜಯಪ್ರಕಾಶ್, ನಿವೃತ್ತ ಯೋಧ ಈಶ್ವರ್ ಮತ್ತು ಇನ್ನಿತರರು ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *