ಕನಿಷ್ಟ ವೇತನಕ್ಕೆ ಆಗ್ರಹಿಸಿ ಮಂಗಳವಾರ ಪಟ್ಟಣದ ತಾಲೂಕು ಪಂಚಾಯಿತಿ ಕಛೇರಿ ಮುಂದೆ ಬಿಸಿ ಊಟ ನೌಕರರು ಪ್ರತಿಭಟನೆ ನಡೆಸಿದರು.

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕಳೆದ 21 ವರ್ಷಗಳಿಂದ 1 ಲಕ್ಷ ಹದಿನೇಳು ಸಾವಿರ ಮಹಿಳೆಯರು 58 ಲಕ್ಷ 39, ಸಾವಿರ ಬಡ ರೈತ ಕೃಷಿ ಕೂಲಿಕಾರರ ಮಕ್ಕಳು ಹೆಚ್ಚು ಸರ್ಕಾರಿ ಶಾಲೆಗಳಿಗೆ ಹೋಗುತ್ತಾರೆ ಅಂತಹ ಮಕ್ಕಳಿಗೆ ಬಿಸಿ ಆಹಾರ ಬೇಯಿಸಿ ಹಾಲು ನೀಡಿ ಶಾಲೆ ಸ್ವಚ್ಛತೆ ಮಾಡಿ ಶಾಲೆಯಲ್ಲಿ ನೀಡುವ ಎಲ್ಲಾ ಕೆಲಸ ನಿರ್ವಹಿಸಿ ಮಕ್ಕಳ ಶೈಕ್ಷಣಿಕ ಆಸಕ್ತಿ ಮೂಡಿಸುವಲ್ಲಿ ಈ ಮಹಿಳೆಯರ ತಾಯ್ತನದ ಪರಿಶ್ರಮಾವಿದೆ. ದಿನಕ್ಕೆ ಸುಮಾರು 6 ಗಂಟೆಗಿಂತಲೂ ಅಧಿಕ ಸಮಯ ಕೆಲಸ ಮಾಡುವ ಇವರ ಪರಿಶ್ರಮ ಗುರುತಿಸಿ ಕನಿಷ್ಠ ಕೂಲಿ 21,000 ನೀಡುವ ಮೂಲಕ ಬಿಸಿಯೂಟ ನೌಕರರನ್ನು ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಸಂಪೂರ್ಣವಾಗಿ ತಂದು ಇವರ ನ್ಯಾಯೋಚಿತ ಬೇಡಿಕೆಗಳಿಗೆ ಸ್ಪಂದಿಸಬೇಕಾಗಿರುವುದು ಸರ್ಕಾರದ ಕರ್ತವ್ಯವಾಗಿದ್ದು ಕೂಡಲೆ ಇವರ ಬೇಡಿಕೆಯನ್ನು ಈಡೇರಿಸೇಕು ಎಂದು ಸಿಐಟಿಯು ಸಂಘಟನೆಯ ನಾಯಕಿ ಸೌಮ್ಯ ಹೇಳಿದರು .

ನಂತರ ಸಿ ಐ ಟಿ ಯು ಸಮ್ಮುಖದಲ್ಲಿ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರಾದ ಹರೀಶ್ ಅವರ ಮುಖಾಂತರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಿಐಟಿಯು ಮುಖಂಡರಾದ , ಅಕ್ಷರ ದಾಸೋಹದ ಪ್ರಧಾನ ಕಾರ್ಯದರ್ಶಿ ಸುಮಿತ್ರ , ಅಧ್ಯಕ್ಷರಾದ ಸಾವಿತ್ರಿ , ಖಜಾಂಜಿ ಮಣಿಯಮ್ಮ , ಸೌಭಾಗ್ಯ, ಶಾಂತ , ಹಾಗೂ ಇನ್ನೂ ಅನೇಕ ಬಿಸಿಯೂಟ ಕಾರ್ಯಕರ್ತೆಯರು ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *