ಬೇಲೂರು : ತಾಲ್ಲೂಕಿನ ಅರೇಹಳ್ಳಿ ಹೋಬಳಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಛೇರಿ ಉದ್ಘಾಟನೆ.ದಲಿತ ಸಂಘರ್ಷ ಸಮಿತಿ (ಪ್ರೊ. ಕೃಷ್ಣಪ್ಪ ಸ್ಥಾಪಿತ) ಕಛೇರಿ ಉದ್ಘಾಟನಾ ಕಾರ್ಯಕ್ರಮವು ಹಾಸನ ಜಿಲ್ಲಾ ಸಂಚಾಲಕರಾದ ನಿಂಗರಾಜು ಅರೇಹಳ್ಳಿ ಇವರ ನೇತೃತ್ವದಲ್ಲಿ ಬೇಲೂರು ತಾಲ್ಲೂಕು ಅರೇಹಳ್ಳಿ ಹೋಬಳಿಯಲ್ಲಿ ಬುದ್ಧ ವಂದನಾ ಮಾಡುವುದರ ಮೂಲಕ ಉದ್ಘಾಟನೆ ಆಯಿತು.

ವಿವಿಧ ಸಂಘ ಸಂಸ್ಥೆಗಳ ಮುಖಂಡರುಗಳು, ವಿವಿಧ ರಾಜಕೀಯ ಮುಖಂಡರುಗಳು, ಪೋಲಿಸ್ ಇಲಾಖೆಯ ಸಿಬ್ಬಂದಿಗಳು ಆಗಮಿಸಿ ಭಗವಾನ್ ಬುದ್ಧರ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಉತ್ತಮ ಸಮಾಜಸೇವಾ ಕಾರ್ಯ ದಲಿತ ಸಂಘರ್ಷ ಸಮಿತಿಯಿಂದ ಆಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಶಿವರಾಂ, ತುಳಸಿ ದಾಸ್ ಕಾಂಗ್ರೆಸ್ ರಾಜ್ಯ ಕಿಸಾನ್ ಘಟಕ ಸಂಚಾಲಕರು ಹಾಗೂ ಸಮಾಜ ಸೇವಕರು, ಕೃಷಿ ಪತ್ತಿನ ಸಂಘದ ಅಧ್ಯಕ್ಷರು ಭಾಗವಹಿಸಿದ್ದರು.*ಜೈ ಭೀಮ್ ನಮೋ ಬುದ್ಧಾಯಾ.*

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *