
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪ ಪರಿಯಲ್ಲಡ್ಕ, ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ಬಿದ್ದಿದ್ದು, ಮನೆ ಸಂಪೂರ್ಣ ಹಾನಿಯಾಗಿದೆ.ಮನೆಯ ಒಳಗೆ ಮಹಿಳೆ ಮಲಗಿದ್ದ ಸಂದರ್ಭ ಘಟನೆಯಾಗಿದ್ದು, ಗಂಭೀರ ಪರಿಸ್ಥಿಯಲಿದ್ದಾರೆ.
ವಾಹನವನ್ನು ತೆರವು ಮಾಡದೇ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.
ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದ್ದು, ಕಾರು ಬಾಡಿಗೆ ಪಡೆದು ಬಳಿಕ ಅದನ್ನು ವಿಜಯಪುರದ ವ್ಯಕ್ತಿಗಳಿಗೆ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬAಧಿಸಿ ಬಂಟ್ವಾಳ ಕಾವಳಪಡೂರು ವಗ್ಗ ನಿವಾಸಿ ಹರೀಶ್ ಯಾನೆ ಹರಿ (35) ಎಂಬಾತನನ್ನು ನಗರ ಪೊಲೀಸರು ಬಂಧಿಸಿದ್ದಾರೆ ಎಂದು ಕಂಡು ಬಂದಿದೆ.
