1. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
2. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗುವುದಿಲ್ಲ.
3. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್‌ಟಿ ರಿಟರ್ನ್ಸ್ ಸಲ್ಲಿಸುವವರಾಗಿದ್ದಲ್ಲಿ ಅರ್ಹರಾಗುವುದಿಲ್ಲ.
ಯೋಜನೆಯಡಿ ನೋಂದಾಯಿಸಲು ಬೇಕಾದ ದಾಖಲಾತಿಗಳು
1. ಪಡಿತರ ಚೀಟಿಯ ಸಂಖ್ಯೆ
2. ಯಜಮಾನಿಯ ಹಾಗೂ ಯಜಮಾನಿ ಪತಿಯ ಆಧಾರ್ ಕಾರ್ಡ್ ಸಂಖ್ಯೆ.
3. ಯಜಮಾನಿಯ ಆಧಾರ್‌ಗೆ ಜೋಡಣೆಯಾಗಿರುವ ಬ್ಯಾಂಕ್ ಖಾತೆಯ ಪಾಸ್ ಬುಕ್/ ಫಲಾನುಭವಿಯು ಇಚ್ಛಿಸುವ ಪರ್ಯಾಯ ಬ್ಯಾಂಕ್ ಖಾತೆಯ ವಿವರ.
ನೋಂದಣಿ ವಿಧಾನ
1. ಫಲಾನುಭವಿಗಳು ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರ ಮೂಲಕ ಸೇವಾಸಿಂಧು ಪೋರ್ಟಲ್‌ನಲ್ಲಿ ಉಚಿತವಾಗಿ ನೋಂದಾಯಿಸಿ ಕೊಳ್ಳಬಹುದು.
2. ಫಲಾನುಭವಿಗಳು ಮೇಲ್ಕಾಣಿಸಿದ ಕೇಂದ್ರಗಳಲ್ಲದೆ “ಪುಜಾ ಪ್ರತಿನಿಧಿ” (citizen Volunteers) ಮೂಲಕ ಸಹ ಸೇವಾಸಿಂಧು ಪೋರ್ಟಲ್‌ನಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು.
3. ಪ್ರತಿ ಫಲಾನುಭವಿಯ ನೋಂದಾವಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902ಕ್ಕೆ ಕಾಲ್ ಮಾಡಿ ಅಥವಾ 8147500500 ನಂಬರ್‌ಗೆ SMS ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದಾಗಿದೆ.
4. ನಿಗಧಿತ ಸಮಯಕ್ಕೆ ಭೇಟಿ ನೀಡಿ ನೋಂದಾವಣೆ ಮಾಡಿಕೊಳ್ಳಲು ಸಾಧ್ಯವಾಗದೆಯಿದ್ದಲ್ಲಿ, ಅದೇ ಕೇಂದ್ರಕ್ಕೆ ಮುಂದಿನ ಯಾವುದೇ ದಿನಗಳಲ್ಲಿ ಕಛೇರಿ ಸಮಯದ ನಂತರ (ಸಂಜೆ 5.00 ಗಂಟೆ ನಂತರ) ತೆರಳಿ ನೋಂದಾಯಿಸಿಕೊಳ್ಳಬಹುದು.
ಗೃಹಲಕ್ಷ್ಮಿ ಯೋಜನೆಯ ಸಹಾಯವಾಣಿ – 1902ಗೃಹಲಕ್ಷ್ಮಿ ಯೋಜನೆ ಕುರಿತು ಯಾವುದೇ ಪ್ರಶ್ನೆಗಳು ಅಥವಾ ಸಮಸ್ಯೆಗಳಿಗೆ ಉಚಿತ Toll Free ಸಹಾಯವಾಣಿ ಸಂಖ್ಯೆ:1902 ಕ್ಕೆ ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ಕರೆ ಮಾಡಬಹುದು.