ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ಬುಧವಾರ ತಿಳಿದುಬಂದಿದೆ.
ಜಮ್ಮು-ಕಾಶ್ಮೀರ (ಅನಂತ್ ನಾಗ್): ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ಬುಧವಾರ ತಿಳಿದುಬಂದಿದೆ.ಗಾಯಗೊಂಡ ಕಾರ್ಮಿಕರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಉಗ್ರರು ಗುಂಡಿನ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದು, ಎಲ್ಲೆಡೆ ತಪಾಸಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.