ಹೊಳೇನರಸೀಪುರ….ವ್ಯಕ್ತಿಯೋರ್ವ ತನ್ನ ಪತ್ನಿಯನ್ನೇ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ, ಎಸ್.ಸಂಕನಹಳ್ಳಿ ಬಳಿಯ ಅರಣ್ಯ ಪ್ರದೇಶದಲ್ಲಿ ಗುರುವಾರ ವರದಿಯಾಗಿದೆ.

ಅಂಬಿಕಾ (28) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಆರೋಪಿ ಚಂದ್ರಮೌಳಿ ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ.ಘಟನೆ ಬಳಿಕ ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಅಂಬಿಕಾ ಆಲಗೌಡನಹಳ್ಳಿ ಗ್ರಾಮದವರಾಗಿದ್ದು, ಹಾಸನದಲ್ಲಿ ಫ್ಯಾಕ್ಟರಿ ಒಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *