ಸಕಲೇಶಪುರ
ವಿಧಾನಸಭೆ ಚುಣಾವಣೆ ಹತ್ತಿರ ವಾಗುತ್ತಿದ್ದಂತೆ ನಾಮಪತ್ರ ಸಲ್ಲಿಸಲು ಆಯಾ ಪಕ್ಷದ ಅಬ್ಯಾರ್ಥಿಗಳು ಸಿದ್ದರಾಗಿದ್ದು
ಅದರಲ್ಲಿ ಮೊದಲಿಗರಾಗಿ ಹೆಚ್ ಕೆ ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ಸಕಲೇಶ್ವರ ಸ್ವಾಮಿ ದೇವಸ್ಥಾನ ಕ್ಕೆ ಬೇಟಿ ನೀಡಿ ಪೂಜೆ ಸಲ್ಲಿಸಿ ತಮ್ಮ ಪಕ್ಷದ ಸಾವಿರಾರು ಕಾರ್ಯಕರ್ತ ರೊಂದಿಗೆ
ರಾಜ ಬೀದಿಯಲ್ಲಿ ವಾದ್ಯಗಳ ನಡುವೆ ನಡೆದು ನೇರ ಉಪ ವಿಭಾಗಾಧಿಕಾರಿ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದರು.
ಈ ಸಂಧರ್ಭದಲ್ಲಿ ಜಿ.ಪಂ ಮಾಜಿ ಸದಸ್ಯೆ ಚಂಚಲಾ ಕುಮಾರಸ್ವಾಮಿ ,ಜೆಡಿಎಸ್ ತಾಲೂಕು ಅಧ್ಯಕ್ಷ ಕೆ.ಎಲ್ ಸೋಮಶೇಖರ್ ಮತ್ತಿತರ ಮುಖಂಡರು ಹಾಜರಿದ್ದರು. ಸಕಲೇಶಪುರ , ಆಲೂರು, ಕಟ್ಟಾಯ ಸೇರಿದಂತೆ ವಿವಿಧ ಭಾಗಗಳಿಂದ ಕಾರ್ಯಕರ್ತರು ಆಗಮಿಸಿದ್ದರು.