ಆಲೂರು.ಆಲೂರು ತಾಲ್ಲೂಕಿನ ಈಶ್ವರಹಳ್ಳಿಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಇಂದು ಸಂಜೆ ಇನೋವಾ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಈ ಅಪಘಾತ ರಾಷ್ಟ್ರೀಯ ಹೆದ್ದಾರಿ 75 ಕಾಮಗಾರಿ ಗುತ್ತಿಗೆದಾರರ ಅವೈಜ್ಞಾನಿಕ ರೀತಿಯಲ್ಲಿ ಮಾಡುತ್ತಾ ಇದ್ದಾರೆ ಮತ್ತು ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವುದದೇ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಾವು ನೋವು ಸಂಭವಿಸುತ್ತಿರುವುದಕ್ಕೆ ಕಾರಣ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಜಾಗಗಳಲ್ಲಿ ಯಾವುದೇ ಸೂಚನಾ ಪಲಕಗಳಿಲ್ಲದೆ ಇರುವುದರಿಂದ ಅಪಘಾತಗಳು ಸಂಭವಿಸುತ್ತಿವೆ.ಅದಷ್ಟು ಬೇಗ ಎಲ್ಲಾ ಕಡೆ ಶೀಘ್ರವಾಗಿ ಎಲ್ಲಾ ಸೂಚನಪಲಕಗಳನ್ನು ಅಳವಡಿಸದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಬೃಹತ್ ಮಟ್ಟದಲ್ಲಿ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಕಾರ್ಯದರ್ಶಿ ರಘು ಪಾಳ್ಯ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *