ಬೇಲೂರು : ಬೇಲೂರು ತಾಲ್ಲೂಕಿನ ಅರೇಹಳ್ಳಿ ಪಟ್ಟಣದಲ್ಲಿರುವ ದಲಿತ ಸಂಘರ್ಷ ಸಮಿತಿ ಕಚೇರಿಗೆ ಭೇಟಿ ನೀಡಿ ಮಾತನಾಡಿದ ಅರಸೀಕೆರೆ ಡಿವೈಎಸ್ಪಿ ಲೋಕೇಶ್ ರವರು ದಿನ ದಲಿತರ ಪರ ನ್ಯಾಯ ಒದಗಿಸಲು ದಲಿತ ಸಂಘರ್ಷ ಸಮಿತಿ ಪ್ರಮುಖ ಪಾತ್ರವಹಿಸಿದೆ ಶೋಷಿತರ ಪರ ಅನ್ಯಾಯಕ್ಕೆ ಒಳಗಾದ ಜನರಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಡಲು ಕಚೇರಿ ತೆರೆದಿರುವುದು ತುಂಬಾ ಒಳ್ಳೆಯ ಕೆಲಸ ಎಂದರು.
ಈ ಸಂದರ್ಭದಲ್ಲಿ ವೃತ್ತ ನಿರೀಕ್ಷಕ ಶ್ರೀಕಾಂತ್. ಅರೆಹಳ್ಳಿ ಪಿಎಸ್ಐ ಲಿಂಗರಾಜ್. ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಅರೇಹಳ್ಳಿ ನಿಂಗರಾಜ್ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.