ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕವನ್ನು ಸೃಷ್ಟಿಸಿದೆ. ಅದರಲ್ಲೂ ಬೆಂಗಳೂರು ಮತ್ತು ಮೈಸೂರಿನಲ್ಲಿ ತೀವ್ರಗತಿಯಲ್ಲಿ ಹರಡುತ್ತಿರುವುದು ಜನರನ್ನು ಬೆಚ್ಚಿ ಬೀಳಿಸುವಂತೆ ಮತ್ತು ಮುನ್ನೆಚ್ಚರಿಕೆ ವಹಿಸುವಂತೆ ಮಾಡಿದೆ.ಸಾಮಾನ್ಯವಾಗಿ ಮಳೆಗಾಲ ಆರಂಭವಾಗುತ್ತಿದ್ದಂತೆಯೇ ಡೆಂಗ್ಯೂ ರೋಗ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ.

ಅದರಲ್ಲೂ ಜಿಟಿ ಜಿಟಿ ಮಳೆ ಬಂದರೆ ಸೊಳ್ಳೆಗಳ ಕಾಟ ಹೆಚ್ಚಾಗಲಿದೆ.

ಒಂದು ವೇಳೆ ಮಳೆ ರಭಸದಿಂದ ಬಂದು ಚರಂಡಿ, ಕೊಳಚೆ ತ್ಯಾಜ್ಯಗಳು ಕೊಚ್ಚಿ ಹೋಗಿ ಪರಿಸರ ಶುದ್ಧವಾದರೆ ಸೊಳ್ಳೆಗಳ ಹಾವಳಿ ಇರುವುದಿಲ್ಲ. ಇದರಿಂದ ರೋಗದ ಬಗ್ಗೆ ಭಯಪಡಬೇಕಾದ ಅಗತ್ಯವಿರುವುದಿಲ್ಲ. ಆದರೆ ಅನೈರ್ಮಲ್ಯದ ಪರಿಸರದಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗ್ಯೂ ಕಾಣಿಸಿಕೊಳ್ಳುತ್ತದೆ ಎಂಬುದನ್ನು ಮರೆಯುವಂತಿಲ್ಲ.ಮಳೆಗಾಲದಲ್ಲಿ ಜ್ವರ ಕಾಣಿಸಿಕೊಳ್ಳುವುದು ಸಾಮಾನ್ಯ. ಆದರೆ ಜ್ವರವನ್ನು ನಿರ್ಲಕ್ಷಿಸದೆ ತಪಾಸಣೆ ಮಾಡಿ ಅದು ಯಾವ ಜ್ವರ ಎಂದು ಪತ್ತೆ ಮಾಡಿ ಚಿಕಿತ್ಸೆ ಪಡೆಯುವುದು ಬಹುಮುಖ್ಯವಾಗಿದೆ.

ಏಕೆಂದರೆ ಈಗ ಬೇರೆ ಬೇರೆ ಹೆಸರಿನ ಜ್ವರಗಳು ಮನುಷ್ಯನನ್ನು ಕಾಡುತ್ತಿರುವುದು ಮಾತ್ರವಲ್ಲದೆ ಬಲಿ ತೆಗೆದುಕೊಳ್ಳುತ್ತಿದೆ. ಆದ್ದರಿಂದ ಈಗ ಕಾಣಿಸಿಕೊಳ್ಳುತ್ತಿರುವ ಡೆಂಗ್ಯೂನಿಂದ ರಕ್ಷಣೆ ಪಡೆಯಬೇಕಾದರೆ, ರೋಗ ಬಾರದಂತೆ ತಡೆಯಬೇಕಾದರೆ ಅದರ ಬಗ್ಗೆ ಒಂದಿಷ್ಟು ಮಾಹಿತಿ ತಿಳಿದುಕೊಂಡು ಅದರಿಂದ ದೂರ ಇರಲು ಬೇಕಾದ ಸುರಕ್ಷಾ ಕ್ರಮಗಳನ್ನು ಅಳವಡಿಸಿಕೊಳ್ಳುವುದು ಬಹುಮುಖ್ಯವಾಗಿದೆ.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *