ಬೆಂಗಳೂರು: ವಿಪಕ್ಷ ನಾಯಕರ ಮೈತ್ರಿಕೂಟದ ಸಭೆಗೆ ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಹೋರಾಟ ನಡೆಸಿದ್ದು, ಈ ಬಗ್ಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ದೇವೇಗೌಡ, ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ಭಾಗಿಯಾಗಿರುವ ವಿಚಾರವಾಗಿ, ಹೆಚ್.ಡಿ.ಕೆ ಟ್ವೀಟ್ ನೋಡಿ ಬಿಜೆಪಿಯಿಂದ ಹೋರಾಟ ಆರಂಭವಾಗಿದೆ. ಹಾಗಾಗಿ ಹೆಚ್.ಡಿ.ಕೆ ಹೋರಾಟವನ್ನು ಬೆಂಬಲಿಸಿದ್ದಾರೆ ಅಷ್ಟೇ. ಇದರಲ್ಲಿ ಬೇರಾವ ರಾಜಕೀಯ ಬೆರೆಸುವ ಅಗತ್ಯವಿಲ್ಲ ಎಂದು ಹೇಳಿದರು.

ಇದೇ ವೇಳೆ ಲೋಕಸಭಾ ಚುನಾವಣೆಯಲ್ಲಿ ಎನ್ ಡಿ ಎ ಜೊತೆ ಜೆಡಿಎಸ್ ಮೈತ್ರಿ ಕುರಿತ ಪ್ರಶ್ನೆಗೆ ಉತ್ತರಿಸಿದ ದೇವೇಗೌಡರು, ಎನ್ ಡಿ ಎಗೂ ಸೇರಲ್ಲ ಯುಪಿಎ ಗೂ ಸೇರಲ್ಲ. ನಾವು ಸ್ವತಂತ್ರವಾಗಿ ಹೋರಾಟ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *