ಬೆಂಗಳೂರಿನ ಬಿಜಿಎಸ್ ವಿಎಸ್ ಐಟಿ ಪ್ರೊಫೆಷನಲ್ ಟ್ರಸ್ಟ್ ನ ವತಿಯಿಂದ ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಗೆ ಶೈಕ್ಷಣಿಕ ಚಟುವಟಿಕೆಗಳಿಗಾಗಿ ಗ್ರೀನ್ ಬೋರ್ಡ್, ಧ್ವನಿವರ್ಧಕದ ಸಲಕರಣೆಗಳು ಮತ್ತು ಸಭಾಂಗಣಕ್ಕೆ ಅವಶ್ಯಕತೆಯ ವಸ್ತುಗಳನ್ನು ಹಸ್ತಾಂತರ ಮಾಡಲಾಯಿತು.
ಈ ಸಂದರ್ಭದಲ್ಲಿ ಟ್ರಸ್ಟ್ ನ ಕಾರ್ಯಕಾರಿ ಸಮಿತಿಯ 9 ಸಾಫ್ಟವೇರ್ ಇಂಜನಿಯರ್ ಗಳು ಶಾಲೆಗೆ ಆಗಮಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ತಮ್ಮ ಬಾಲ್ಯದ ಅನುಭವವನ್ನು ಹಂಚಿಕೊಂಡು ವಿದ್ಯಾರ್ಥಿಗಳಿಗೆ ಸ್ಪೂರ್ತಿ ತುಂಬಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ನಡೆಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸಚಿನ್ ಹೆಚ್.ಎಂ. ವಹಿಸಿದ್ದರು.ಹಿರಿಯ ಉಪನ್ಯಾಸಕಿ ಮತ್ತು ಪ್ರಭಾರ ಪ್ರಾಂಶುಪಾಲೆ ವೇದವತಿ ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಕ ರಮೇಶ್ ಸ್ವಾಗತಿಸಿ, ಶಿಕ್ಷಕರಾದ ಪಾಲಾಕ್ಷ ವಂದಿಸಿದರು.ಪ್ರಾಥಮಿಕ ವಿಭಾಗದ ಶಿಕ್ಷಕಿ ಶೋಭಾ ಕಾರ್ಯಕ್ರಮ ನಿರೂಪಿಸಿದರು.