ಪಠ್ಯ ಪುಸ್ತಕ ಪೂರ್ಣ ಪರಿಷ್ಕರಣೆ ಆಗಲಿದೆ. ಬಿಜೆಪಿಯವರು ಪಠ್ಯವನ್ನು ಬದಲಿಸಿದ್ದರು. ನಾವು ತುರ್ತಾಗಿ ಸ್ವಲ್ಪ ಬದಲಾವಣೆ ಮಾಡಿ ಮೊದಲು ಇದ್ದಂತೆ ತಂದಿದ್ದೇವೆ. ಮುಂದಿನ ವರ್ಷ ಮಕ್ಕಳಿಗೆ ಅನುಕೂಲವಾಗುವಂತೆ ಬದಲಾಯಿಸುತ್ತೇವೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಈ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಅಧಿಕಾರಕ್ಕೆ ಬಂದ ಕೂಡಲೇ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದ್ದೇನೆ. ಮಕ್ಕಳ ಭವಿಷ್ಯಕ್ಕೆ ಒಳ್ಳೆದಾಗಲಿ ಎಂದು ಈ ತೀರ್ಮಾನ ಮಾಡಲಾಗಿದೆ. ಇದರಲ್ಲಿ ಬಿಜೆಪಿಯವರು ಹೇಳುವ ಯಾವುದೇ ರಾಜಕೀಯ ಇಲ್ಲ. ಪಠ್ಯ ಪರಿಷ್ಕರಣೆ ವಿಚಾರವಾಗಿ ತಜ್ಞರ ಸಮಿತಿಯ ಸಹಾಯ ಪಡೆದು ಅವಶ್ಯಕತೆ ಇದ್ದಲ್ಲಿ ಬದಲಾವಣೆ ಮಾಡುತ್ತೇವೆ. ಯಾವುದೇ ರಾಜಕೀಯ ಉದ್ದೇಶ ಇಲ್ಲದೇ ಬದಲಾವಣೆ ಆಗಲಿದೆ. ಮುಖ್ಯಮಂತ್ರಿಗಳ ಸಲಹೆ ಪಡೆದು ಅವರ ಸಹಕಾರದಿಂದ ಎಲ್ಲವೂ ಆಗಲಿದೆ. ಮಕ್ಕಳಿಗೆ ಉತ್ತಮ ಮತ್ತು ತಿಳುವಳಿಕೆಯ ಪಠ್ಯಗಳು ಇರಬೇಕು” ಎಂದರು.ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ.

ಬಿಜೆಪಿಯವರು ಇದೇ ನೀಚ ಬುದ್ದಿ ಮಾಡಿಕೊಂಡು ಹೋಗಲಿ.. ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ್ ಕಟೀಲ್ ಅವರ ಭಾವನಾತ್ಮಕ ನಾಟಕಕ್ಕೆ ರಾಜ್ಯದ ಜನ ಬುದ್ಧಿ ಕಲಿಸಿದ್ದಾರೆ. ಅವರನ್ನು ಸೋಲಿಸಿ ಜನರು ಕಾಂಗ್ರೆಸ್ ಗೆಲ್ಲಿಸಿದ್ದಾರೆ. ಬಿಜೆಪಿಯವರ ಜೀವನ ನಡೆಯುವುದು ಕೂಡ ನಮ್ಮ ಗ್ಯಾರಂಟಿಗಳ ಮೇಲೆ” ಎಂದು ಹೇಳಿದ್ದಾರೆ.ಸದ್ಯ ಮಕ್ಕಳ ಪೌಷ್ಟಿಕತೆಗಾಗಿ ವಾರಕ್ಕೆ ಎರಡು ಬಾರಿ ಮೊಟ್ಟೆ ಕೊಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಮಧ್ಯೆ ಸರ್ಕಾರ ಇದನ್ನ ಮಾಡಿದೆ. ಶಿಕ್ಷಕರ ಕೊರತೆ ರಾಜ್ಯದಲ್ಲಿ ಇದೆ, ಅದನ್ನ ನಾವು ಸರಿ ಮಾಡುತ್ತೇವೆ. ಇದರ ಮಧ್ಯೆ ದಾಖಲೆ ಪ್ರಮಾಣದಲ್ಲಿ 25 ಸಾವಿರ ಶಿಕ್ಷಕರ ವರ್ಗಾವಣೆ ಆಗಿದೆ” ಎಂದರು.

ಈ ಬಿಜೆಪಿಯವರು ಸಭಾಧ್ಯಕ್ಷರ ಪೀಠವನ್ನೇ ಅವಮಾನಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲೂ ರಾಜ್ಯದ ಜನ ನಮ್ಮನ್ನ ಗೆಲ್ಲಿಸುತ್ತಾರೆ. ಕರಾವಳಿ ಭಾಗ ಕಲ್ಮಶ ಆಗಿದ್ದು ನಿಜ, ಆದರೆ ಮತ್ತೆ ಶಾಂತಿ ಸೌಹಾರ್ದತೆ ಬರಲಿದೆ. ನಮ್ಮ ಸರ್ಕಾರ ಅವೆಲ್ಲವನ್ನೂ ಮತ್ತೆ ಮೂಡಿಸಲಿದೆ” ಎಂದರು.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *