ಸಕಲೇಶಪುರ : ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ವ್ಯಾಪಕ ಮಳೆ ಯಾಗುತ್ತಿರುವ ಕಾರಣ ಸೋಮವಾರ (ಜೂಲೈ 24) ರಂದು ಸಕಲೇಶಪುರ, ಬೇಲೂರು ಆಲೂರು ಹಾಗೂ ಅರಕಲಗೂಡು ತಾಲೂಕಿನ ಎಲ್ಲಾ ಅಂಗನವಾಡಿ,ಸರ್ಕಾರಿ, ಅನುದಾನಿತ ಹಾಗೂ ಖಾಸಗಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಸೋಮವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ತಾಲೂಕು ಆಡಳಿತ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ತಹಸೀಲ್ದಾರ್ ರವರ ವರದಿ ಅಧರಿಸಿ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.