ರಾಜ್ಯದ ಹಲವೆಡೆ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.ಇಂದು ಮಡಿಕೇರಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆಮಡಿಕೇರಿ ಜಿಲ್ಲೆಯಲ್ಲಿ ಸತತ ಕೆಲದ ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಕೊಡಗು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಡಿಸಿ ಆದೇಶಿಸಿದ್ದಾರೆ.ಕೊಡಗು ಜಿಲ್ಲೆಯಾಧ್ಯಂತ ಮಳೆರಾಯ ಆರ್ಭಟಿಸಿದ್ದಾನೆ. ಮಹಾ ಮಳೆ ಜಿಲ್ಲೆಯ ಜನರು ಬೆಚ್ಚಿಬಿದ್ದಾರೆ. ಭಾರೀ ಮಳೆ ಮುಂದುವರಿದ ಹಿನ್ನಲೆಯಲ್ಲಿ ಇಂದು ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಈ ಬಗ್ಗೆ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದು, ಇಂದು ಜಿಲ್ಲೆಯಲ್ಲಿ ಮಳೆ ಮುಂದುವರೆಯುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಇಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದಾಗಿ ತಿಳಿಸಿದ್ದಾರೆ.ಉತ್ತರ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆಉತ್ತರ ಕನ್ನಡ ಜಿಲ್ಲೆಯೂ ಮಳೆ ಆರ್ಭಟಿಸುತ್ತಿದ್ದು ( Heavy Rain ), ಮನೆಯಿಂದ ಹೊರ ಬಾರದಂತೆ ಜಿಲ್ಲೆಯಲ್ಲಿ ಮಳೆ ಆರ್ಭಟಿಸುತ್ತಿದೆ. ಹೀಗಾಗಿ ಮಕ್ಕಳ ಸುರಕ್ಷತೆಯ ಕಾರಣದಿಂದ ಇಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ( School and College Holiday ) ನೀಡಿ ಜಿಲ್ಲಾಧಿಕಾರಿ ಪ್ರಭುಲಿಂಗ್ ಕವಲಿಕಟ್ಟಿ ಆದೇಶ ಹೊರಡಿಸಿದ್ದಾರೆ.ಇಂದು ಬೆಳಗಾವಿಯ ಈ ತಾಲೂಕುಗಳ ಶಾಲೆಗಳಿಗೆ ರಜೆಬೆಳಗಾವಿ ಜಿಲ್ಲೆಯ ಖಾನಾಪುರ, ಕಿತ್ತೂರು, ಬೆಳಗಾವಿ ನಗರ ಮತ್ತು ಗ್ರಾಮಾಂತರ ತಾಲೂಕುಗಳ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದ ಕಾರಣ ಸೋಮವಾರದ ಇಂದು ರಜೆ ನೀಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.ಮಳೆ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಮೂರು ತಾಲೂಕಿನ ಶಾಲೆಗಳಿಗೆ ಸೋಮವಾರದ ಇಂದು ಒಂದು ದಿನ ರಜೆ ನೀಡಲಾಗಿದೆ.ಇಂದು ‘ಶಿವಮೊಗ್ಗ ಜಿಲ್ಲೆ’ಯ ‘ಎಲ್ಲಾ ಶಾಲೆ’ಗಳಿಗೆ ರಜೆ ಘೋಷಣೆಈ ಬಗ್ಗೆ ಶಿವಮೊಗ್ಗ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ( School Education Department ) ಉಪನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿಗಳು, ಶಿವಮೊಗ್ಗ ಜಿಲ್ಲೆ ಅವರ ಸೂಚನೆ ಮೇರೆಗೆ ದಿನಾಂಕ:24/07/2023ರ ಇಂದು ಶಿವಮೊಗ್ಗ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸದರಿ ರಜೆಯನ್ನು ಮುಂದಿನ ರಜಾ ದಿನದಲ್ಲಿ ತರಗತಿ ನಡೆಸುವ ಮೂಲಕ ಶಾಲಾ ದಿನಗಳನ್ನು ಮರು ಹೊಂದಾಣಿಕೆ ಮಾಡಿಕೊಳ್ಳಲು ಶಾಲಾ ಮುಖ್ಯ ಶಿಕ್ಷಕರಿಗೆ ಸೂಚಿಸಿದ್ದಾರೆ.ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಾಲಾ-ಕಾಲೇಜುಗಳಿಗೆ ಇಂದು ರಜೆಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ, ಬೈಂದೂರು ತಾಲೂಕಿನ ಶಾಲೆಗಳು, ಪಿಯುಸಿ ಕಾಲೇಜುಗಳಿಗೆ ಇಂದು ರಜೆಯನ್ನು ಘೋಷಿಸಲಾಗಿದೆ.ಇಂದು ಹಾಸನ ಜಿಲ್ಲೆಯ ಐದು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣದಿಂದಾಗಿ, ಹಾಸನ ತಾಲೂಕು, ಸಕಲೇಶಪುರ, ಬೇಲೂರು ಹಾಗೂ ಅರಕಲಗೂಡು ಶಾಲೆಗಳಿಗೆ ರಜೆಯನ್ನು ಇಂದು ಘೋಷಣೆ ಮಾಡಿ ಹಾಸನ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಆದೇಶಿಸಿದ್ದಾರೆ.ಇಂದು ಹಾಸನ ತಾಲೂಕು, ಆಲೂರು, ಸಕಲೇಶಪುರ, ಬೇಲೂರು ಹಾಗೂ ಅರಕಲಗೂಡಿನ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ರಜೆಯನ್ನು ಘೋಷಣೆ ಮಾಡಿದ್ದಾರೆ.ಚಿಕ್ಕಮಗಳೂರು ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ಇಂದು ರಜೆಈ ಬಗ್ಗೆ ನಿನ್ನೆಯ ತಡರಾತ್ರಿ ಆದೇಶವನ್ನು ಹೊರಡಿಸಿರುವಂತ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು, ದಿನಾಂಕ 23-07-2023ರಂದು ಬಿಟ್ಟು ಬಿಡದೇ ಮಳೆ ಸುರಿಯುತ್ತಿರುವುದರಿಂದ ಮಳೆಯ ಅವಲೋಕನದಂತೆ ಮಳೆಯು ತೀವ್ರತರವಾಗಿದ್ದು, ನಿರಂತರವಾಗಿ ಮಳೆ ಬೀಳುತ್ತಿರುವುದರಿಂದ ವಿದ್ಯಾರ್ಥಿಗಳು ಶಾಲೆಗಳಿಗೆ ಹಾಜರಾಗಲು ತೊಂದರೆಯಾಗುತ್ತಿದೆ ಎಂದಿದ್ದಾರೆ.ಶಾಲಾ ಮಕ್ಕಳ ಹಿತದೃಷ್ಠಿಯಿಂದ ರಜೆ ಘೋಷಿಸುವುದು ಅನಿವಾರ್ಯವಾಗಿದೆಯೆಂದು ಮನಗಂಡು, ದಿನಾಂಕ 24-07-2023ರ ಸೋಮವಾರದ ಇಂದು ವಿಪತ್ತು ನಿರ್ವಹಣಾ ಕಾಯ್ದೆ ಕಲಂ 26, 30 ಹಾಗೂ 34ರ ಅಧಿಕಾರದಡಿ ರಜೆಯನ್ನು ಘೋಷಿಸಿದ್ದಾರೆ.ಇಂದು ಚಿಕ್ಕಮಗಳೂರು ತಾಲೂಕಿನ ಕಸಬಾ, ಅಂಬಳೆ ಹಾಗೂ ಲಕ್ಯಾ ಹೋಬಳಿ ಹೊರತುಪಡಿಸಿದಂತೆ ಎಲ್ಲಾ ಶಾಲೆಗಳಿಗೆ ರಜೆ ನೀಡಲಾಗಿದೆ. ಇದಲ್ಲದೇ ಮೂಡಿಗೆರೆ, ಕೊಪ್ಪ, ಶೃಂಗೇರಿ, ಕಳಸ, ಎನ್ ಆರ್ ಪುರ ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ.ಇಂದು ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ ಮಾತ್ರವೇ ರಜೆ ಇರಲಿದೆ. ಈ ರಜೆಯ ಅವಧಿಯ ಪಠ್ಯಗಳನ್ನು ಇತರೆ ಸಾರ್ವತ್ರಿಕ ರಜಾ ದಿನಗಳಂದು ಸರಿದೂಗಿಸಲು ಸೂಚಿಸಲಾಗಿದೆ.ಧಾರವಾಡ ಜಿಲ್ಲೆಯ ಶಾಲೆಗಳಿಗೆ ಇಂದು ರಜೆಧಾರವಾಡ ಜಿಲ್ಲೆಯಲ್ಲೂ ವರುಣಾಘಾತ ಉಂಟಾಗಿದ್ದು, ನಿರಂತರ ಮಳೆಯ ಕಾರಣದಿಂದಾಗಿ ಧಾರವಾಡ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ರಜೆಯನ್ನು ಘೋಷಿಸಿ, ಜಿಲ್ಲಾಧಇಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.ದಾವಣಗೆರೆ ಜಿಲ್ಲೆಯ ಈ ತಾಲೂಕಿನ ಶಾಲೆಗಳಿಗೆ ಇಂದು ರಜೆದಾವಣಗೆರೆ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಇಂದು ಕೂಡ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ, ಚನ್ನಗಿರಿ ಹಾಗೂ ನ್ಯಾಯಮತಿ ತಾಲೂಕಿನ ಶಾಲೆಗಳಿಗೆ ರಜೆಯನ್ನು ನೀಡಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಆದೇಶಿಸಿದ್ದಾರೆ.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *