
ಹಾಸನ : ಜುಲೈ, 24: ಭಾರೀ ಮಳೆ ಹಿನ್ನೆಲೆ ರಾಜ್ಯದ ಹಲವು ಜಲಾಶಯಗಳ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಹಾಗೆಯೇ ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು ಹಾಗೂ ಬೇಲೂರು ತಾಲೂಕುಗಳಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆರಾಯನ ಆರ್ಭಟ ಮುಂದುವರೆದ ಹಿನ್ನೆಲೆ ಹೇಮಾವತಿ ಜಲಾಶಯದ ಒಳಹರಿವಿನಲ್ಲಿ ಏರಿಕೆಯಾಗಿದೆ.
37.103 ಟಿಎಂಸಿ ಗರಿಷ್ಠ ನೀರಿನ ಸಾಮರ್ಥ್ಯ ಇರುವ ಹೇಮಾವತಿ ಜಲಾಶಯದಲ್ಲಿ ಇದೀಗ 23,142 ಕ್ಯೂಸೆಕ್ ನೀರು ಒಳಹರಿವು ಇದೆ. ಗರಿಷ್ಠ 2922 ಅಡಿಗಳನ್ನು ಇರುವ ಈ ಡ್ಯಾಂನಲ್ಲಿ ಸದ್ಯ 2903.05 ಅಡಿ ನೀರು ಸಂಗ್ರಹವಾಹಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

