ಕ್ಯಾಂಟರ್ ಹಾಗೂ ಕಾರು ನಡುವೆ ಅಪಘಾತ: ಸಕಲೇಶಪುರ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ನಿಧನಸಕಲೇಶಪುರ: ಚನ್ನರಾಯಪಟ್ಟಣ ತಾಲೂಕಿನ ಉದಯಪುರ ಸಮೀಪ ಕ್ಯಾಂಟರ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಸಕಲೇಶಪುರ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೆ.ಎಸ್ ಮೋಹನ್ ಕುಮಾರ್ ರವರಿಗೆ ತೀವ್ರ ಪೆಟ್ಟು ಬಿದ್ದು ಹಾಸನದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲು ಮಾಡಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ .