ಸಕಲೇಶಪುರ.ರಾಷ್ಟ್ರೀಯ ಹೆದ್ದಾರಿ ಕಳಪೆ ಕಾಮಗಾರಿಯ ಬಗ್ಗೆ ಮಾನ್ಯ ಲೋಕಸಭಾ ಸದಸ್ಯರಾದ ಪ್ರಜ್ವಲ್ ರೇವಣ್ಣನವರು ಹಾಗೂ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭೆ ಕ್ಷೇತ್ರದ ಸದಸ್ಯರು ಆದ ಸಿಮೆಂಟ್ ಮಂಜುನಾಥ್ ರವರು ಬಾಗೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ದೊಡ್ಡ ಮಟ್ಟದಲ್ಲಿ ಅನಾವುತ ಆಗುವ ಮುಂಚೆ ಸ್ಥಳ ವೀಕ್ಷಿಸಬೇಕು ಎಂದು ಮನವಿ ಹಾಗೆ ಬಾಗೆಯಲ್ಲಿ ರಸ್ತೆ ಕಾಮಗಾರಿ ಕಳಪೆ ಯಿಂದ ಕೂಡಿದು ಇನ್ನು ಎರಡು ಮೂರು ದಿನಗಳಲ್ಲಿ ಒಂದು ಬದಿಯ ರಸ್ತೆ ಸಂಪೂರ್ಣ ಕುಸಿದು ಹೋಗುವ ಸಂಭವವಿದೆ ಹಾಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಕಾಮಗಾರಿ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತಿದ್ದೇವೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಬೃಹತ್ ಮಟ್ಟದಲ್ಲಿ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸುತ್ತಿದ್ದವೆ ಎಂದು ತಿಳಿಸಿದ ರಘು ಪಾಳ್ಯ ಕರವೇ ಜಿಲ್ಲಾ ಕಾರ್ಯದರ್ಶಿ ಹಾಗೂ ಆಲೂರು ಸಕಲೇಶಪುರ ತಾಲ್ಲೂಕಿನ ಕರವೇ ಉಸ್ತುವಾರಿ.