
ಸಕಲೇಶಪುರ: ಪುರಸಭಾ ವ್ಯಾಪ್ತಿಯಲ್ಲಿ ಗೃಹಲಕ್ಷ್ಮಿ ನೋಂದಣಿಗಾಗಿ ಅಗ್ರಹಾರ ಸರ್ಕಾರಿ ಪ್ರಾಥಮಿಕ ಶಾಲೆ, ಪುರಸಭಾ ಕಚೇರಿ ಹಾಗೂ ಸಂತ ಜೋಸೆಫರ ಪ್ರಾಥಮಿಕ ಶಾಲಾ ಆವರಣದಲ್ಲಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದೆ.
ಭಾನುವಾರ ಹೊರತುಪಡಿಸಿ ಎಲ್ಲಾ ದಿನಗಳಲ್ಲಿ ನೋಂದಣಿ ಮಾಡಲಾಗುವುದು.
ಸರ್ಕಾರ ಕೊನೆಯ ದಿನಾಂಕ ನಿಗದಿಗೊಳಿಸಿಲ್ಲ. ಮನೆಯ ಯಜಮಾನಿ ಪರವಾಗಿ ಯಾರು ಬೇಕಾದರೂ ಕೇಂದ್ರಕ್ಕೆ ಬಂದು ನೋಂದಣಿ ಮಾಡಿಸಬಹುದು.ಪಡಿತರ ಚೀಟಿ, ಆಧಾರ್ ಕಾರ್ಡ್ ಮತ್ತು ಓಟಿಪಿಗಾಗಿ ಮೊಬೈಲ್ ತರಬೇಕು. ಯಾವ ಕೇಂದ್ರದಲ್ಲಿ ಬೇಕಾದರೂ ನೋಂದಣಿ ಮಾಡಿಸಬಹುದು ಎಂದು ಪುರಸಭಾ ಮುಖ್ಯಾಧಿಕಾರಿ ಡಾ. ಜಯಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

