ಬೆಳಗಾವಿ, ಹಾಸನ, ಕಲಬುರಗಿ ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆಯಲ್ಲೂ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

ಪುಷ್ಯ ಮಳೆಯ ಎಚ್ಚರಿಕೆ! 14 ಜಿಲ್ಲೆಗಳಲ್ಲಿ ಪುಷ್ಯ ಮಳೆ ಅಬ್ಬರದ ಎಚ್ಚರಿಕೆ ನೀಡಲಾಗಿದೆ. ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಶಾಲಾ-ಕಾಲೇಜುಗಳಿಗೆ ಹೋಗಲು ಮಕ್ಕಳು ಪರದಾಡುವಂತಾಗಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗಿನ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಇಂದು, ನಾಳೆ ಚಿತ್ರದುರ್ಗ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಲಬುರಗಿ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *