
ಹಾಸನ: ಹಿಮ್ಸ್ ನಿರ್ದೇಶಕ ಡಾ.ಬಿ.ಸಿ.ರವಿಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಕಳೆದ 8 ವರ್ಷಗಳಿಂದ ಹಿಮ್ಸ್ ನಿರ್ದೇಶಕ ಹಾಗೂ ಡೀನ್ ಆಗಿದ್ದ ರವಿಕುಮಾರ್, ವೈದ್ಯಕೀಯ ಶಿಕ್ಷಣ ಸಚಿವರು, ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅವರಿಗೆ ಬರೆದಿರುವ ಪತ್ರದಲ್ಲಿ ಈ ಹುದ್ದೆಗೆ ಸ್ವಯಂ ಪ್ರೇರಿತನಾಗಿ ರಾಜೀನಾಮೆ ನೀಡುತ್ತಿದ್ದು, ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ.

