
ಬೇಲೂರು .ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ತಾಲೂಕು ಜಯ ಕರ್ನಾಟಕ ಸಂಘಟನೆ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪಟ್ಟಣದ ಡಾ.ಅಂಬೇಡ್ಕರ್ ಪ್ರತಿಮೆ ಮುಂಭಾಗ ಬುಧವಾರ ರಾತ್ರಿ ವಿಜಯೋತ್ಸವ ಆಚರಿಸಿದ ನಂತರ ಹುತಾತ್ಮ ಯೋಧರ ಸ್ಮರಣಾರ್ಥ ಮೇಣದ ಬತ್ತಿಗಳನ್ನು ಹಚ್ಚಿ ಗೌರವ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಯ ಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ಎಸ್.ಎಂ.ರಾಜು, ಜಿಲ್ಲಾಧ್ಯಕ್ಷ ಎಂ.ಕೆ.ಆರ್.ಸೋಮೇಶ್ ಕಾರ್ಯಾಧ್ಯಕ್ಷ ಲಕ್ಷ್ಮಣ್, ತಾಲೂಕು ಯುವ ಘಟಕದ ಉಪಾಧ್ಯಕ್ಷ ಹೇಮಂತ್, ವಿದ್ಯಾರ್ಥಿ ಘಟಕದ ಅಧ್ಯಕ್ಷ ಶ್ರೇಯಸ್‌ಗೌಡ, ಮುಖಂಡರಾದ ಚರಣ್, ಲೋಹಿತ್, ದಿಲೀಪ್, ಕಾರ್ತಿಕ್, ರಾಜೇಶ್, ಸುಧರ್ಶನ್, ವೀರಣ್ಣ, ಕೃಷ್ಣ ಸೇರಿದಂತೆ ಇತರರು.

