
ಸಕಲೇಶಪುರ:- ಸಕಲೇಶಪುರ ತಾಲೂಕು ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮಪಂಚಾಯಿತಿ ಬೆಳೆಗಾರರ ಸಂಘದ 8ನೇ ಮಾಸಿಕ ಸಭೆಯನ್ನು ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಯಾಸಳೂರು ಅರಣ್ಯ ಇಲಾಖೆಯ ಅಧಿಕಾರಿಗಳು ಕಾಡುಆನೆ ಸಮಸ್ಯೆ ಹಾಗೂ ಅದಕ್ಕೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಳಲಹಳ್ಳಿ ಗ್ರಾಮ ಪಂಚಾಯಿತಿ ಬೆಳೆಗಾರ ಸಂಘದ ಅಧ್ಯಕ್ಷರಾದ ಚಿನ್ನಹಳ್ಳಿ ಬಾಲು ವಹಿಸಿಕೊಂಡಿದ್ದರು, ಉಪಾಧ್ಯಕ್ಷರಾದ ವಿಶ್ವನಾಥ್, ಗೌರವಾಧ್ಯಕ್ಷರಾದ ವಳಲಹಳ್ಳಿ ರಾಜೇಗೌಡ, ಜಿಲ್ಲಾ ಬೆಳೆಗಾರರ ಸಂಘದ ಸಂಘಟನಾ ಕಾರ್ಯದರ್ಶಿ ಕೆ .ಪಿ.ಕೃಷ್ಣೇಗೌಡ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ವ. ರಾಜೇ ಗೌಡ, ಸಹ ಕಾರ್ಯದರ್ಶಿ ದರ್ಶನ್ , ಹೋಬಳಿ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ರಮೇಶ್ , ಯಸಳೂರು ಅರಣ್ಯ ಅಧಿಕಾರಿ ಗಳಾದ ನರಸಿಂಹ ಮೂರ್ತಿ, ಹಾಗೂ ನವೀನ್ ಸೇರಿದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ಹಾಗೂ ಬೆಳೆಗಾರರ ಸಂಘದ ಸದಸ್ಯರು ಭಾಗವಹಿಸಿ 8ನೇ ಮಾಸಿಕ ಸಭೆಯನ್ನು ಯಶಸ್ವಿಗೊಳಿಸಿದರು..




