
ಹೆತ್ತೂರು: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ವಿಶೇಷ ಉಪನ್ಯಾಸ ನೀಡಿದ ರಾಜ್ಯಶಾಸ್ತ್ರ ಉಪನ್ಯಾಸಕ ಸಿದ್ದೇಶ್ ಎಂ.ಎಲ್.ಮಾನವ ಕಳ್ಳ ಸಾಗಾಣಿಕೆಯ ಲಕ್ಷಣಗಳು, ಪರಿಣಾಮಗಳು ಮತ್ತು ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರದ ಕುರಿತು ವಿವರಿಸಿದರು. ಪ್ರಾಂಶುಪಾಲ ಮಂಜುನಾಥ ಬಿ.ಡಿ. ಪ್ರತಿಜ್ಞೆ ಬೋಧಿಸಿದರು. ಉಪನ್ಯಾಸಕ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



