ಆಲೂರು ತಾಲ್ಲೂಕಿನ ಪಾಳ್ಯ ಹೋಬಳಿಯ ಗುಂಡನ ಬೆಳ್ಳೂರು ಸರ್ಕಾರಿ ಶಾಲೆಯ ಮಕ್ಕಳಿಗೆ ಸಮವಸ್ತ್ರ, ಟೈ , ಬೆಲ್ಟ್ ಹಾಗೂ ಕಲಿಕಾ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಿದ ರಘು ಪಾಳ್ಯ

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಕಾರ್ಯದರ್ಶಿ ಹಾಗೂ ಸಕಲೇಶಪುರ ಆಲೂರು ಕರವೇ ಉಸ್ತುವಾರಿ.ರಘು ಪಾಳ್ಯ ರವರು 15 ವರ್ಷಗಳಿಂದ ಸತತವಾಗಿ ಪ್ರತಿ ವರ್ಷ ಒಂದೊಂದು ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಟೈ, ಬೆಲ್ಟ್ ಹಾಗೂ ಕಲಿಕಾ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡುತ್ತಿರುವುದು ಶ್ಲಾಘನೀಯ.

ಇದೇ ಸಂದರ್ಭದಲ್ಲಿ ರಘು ಪಾಳ್ಯ ರವರಿಗೆ ಶಾಲೆಯ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಈ ಸಿ ಜಿ ರುದ್ರೇಶ್, ಬಿ ಆರ್ ಸಿ ಸಿ ಆರ್ ಟಿ ವಿನೋದ್, ಮುಖ್ಯಶಿಕ್ಷಕರು ದೆವೇಂದ್ರಪ್ಪ, ಶಿಕ್ಷಕರು,ಶಾಲಾಭಿವೃದ್ಧಿ ಅಧ್ಯಕ್ಷರು ಹಾಗೂ ಮಕ್ಕಳ ಪೋಷಕರು ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *