
ಆಲೂರು ತಾಲೂಕಿನ 10 ರಿಂದ 12 ಗ್ರಾಮಗಳಲ್ಲಿ ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ಕೆಲ ಕೊಳವೆಬಾವಿಗಳು ಬತ್ತಿವೆ ಎಂದು ಗ್ರಾಮ ಪಂಚಾಯಿತಿಗಳಿಂದ ವರದಿ ಬರುತ್ತಿದೆ ಕೆಂಚಮ್ಮ ದೇವಸ್ಥಾನದ ಹಿಂಬದಿಯಲ್ಲಿರುವ ಕಲ್ಯಾಣಿ ಸ್ವಚ್ಛಗೊಳಿಸಲು ಗ್ರಾಮ ಪಂಚಾಯಿತಿಗೆ ಅವಕಾಶವಿದೆ ಆದರೂ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸುತ್ತಿಲ್ಲ. ಮಲೆನಾಡಿನಲ್ಲಿ ನೀರಿಗೆ ಸಮಸ್ಯೆ ಉಂಟಾಗಿದೆ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗೆ ಅಹಂಕಾರ ಉಲ್ಬಣವಾಗಿದೆ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಚುನಾವಣೆಯ ಕುಂಟು ನೆಪ ಹೇಳುತ್ತಿದ್ದಾರೆ ಇದರಿಂದಾಗಿ ಮಹಿಳೆಯರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೇಸಿಗೆ ಮುಂದುವರಿದರೆ ಅರ್ಹ ಗ್ರಾಮಗಳಲ್ಲಿ ಕೊಳವೆಬಾವಿ ಕೊರೆಸಲಾಗುವುದು. ಸ್ವಂತ ಸಂಪನ್ಮೂಲವಿದ್ದರೆ ಬಳಸಿಕೊಳ್ಳಲಾಗುವುದು ಖಾಸಗಿ ಕೊಳವೆಬಾವಿಗಳಿಂದ ಬಾಡಿಗೆ ರೂಪದಲ್ಲಿ ನೀರು ಪಡೆದು ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುವುದು. ಯಾವುದೇ ರೀತಿಯಲ್ಲಾದರೂ ಜನ, ಜಾನುವಾರುಗಳಿಗೆ ತೊಂದರೆಯಾಗದಂತೆ ಯುದ್ಧೋಪಾದಿಯಲ್ಲಿ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುವುದು. ಮೇಲಧಿಕಾರಿಗಳಿಗೆ ವರದಿ ನೀಡಲಾಗುವುದು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ನಾರಾಯಣ ಸ್ವಾಮಿ ತಿಳಿಸಿದ್ದಾರೆ.
