
ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮುರುಳಿ ಮೋಹನ್ ರವರು ಚುನಾವಣಾ ಅಧಿಕಾರಿ ಅನ್ಮೋಲ್ ಜೈನ್ ರವರಿಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.ಮೊದಲಿಗೆ ಶ್ರೀ ಸಕಲೇಶ್ವರಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆಯ ಮೊದಲೇ ಚುನಾವಣಾಧಿಕಾರಿ ಅನ್ಮೋಲ್ ಜೈನ್ ಅವರಿಗೆ ನಾಮಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಬೈರಮುಡಿ ಚಂದ್ರು, KPCC ಸದಸ್ಯ ಕೊಲ್ಲಹಳ್ಳಿ ಸಲೀಂ, ಎಡೆಹಳ್ಳಿ ಆರ್ ಮಂಜುನಾಥ್, ಮುರುಳಿ ಮೋಹನ್ ಪತ್ನಿ ನಂದಿನಿ ಇದ್ದರು.
