ಬೆಂಗಳೂರು: ಚಂದ್ರಯಾನ-3 (Chandrayaan-3) ಬಾಹ್ಯಾಕಾಶ ನೌಕೆಯು ಶನಿವಾರ ಸಂಜೆ ವೇಳೆಗೆ ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ತಿಳಿಸಿದೆ.

ಭೂಮಿಯಿಂದ ನಭಕ್ಕೆ ಹಾರಿದ 22 ದಿನಗಳ ಬಳಿಕ ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರಿದೆ. ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಚಂದ್ರಯಾನ್-3 ಗಗನನೌಕೆಯನ್ನ ಸೇರಿಸುವ ಲೂನಾರ್ ಆರ್ಬಿಟ್ ಇಂಜೆಕ್ಷನ್‌ ಪ್ರಕ್ರಿಯೆಯನ್ನು ಇಸ್ರೋ ಪೂರ್ಣಗೊಳಿಸಿದೆ. ಬೆಂಗಳೂರಿನ ಇಸ್ರೋದ ಟೆಲಿಮೆಟ್ರಿ, ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್ ಸಂಸ್ಥೆಯು ಲೂನಾರ್ ಆರ್ಬಿಟ್ ಇಂಜೆಕ್ಷನ್‌ (Lunar Orbit Injection) ಪ್ರಕ್ರಿಯೆಯನ್ನ ಕಾರ್ಯಗತಗೊಳಿಸುವಲ್ಲಿ ಯಶಸ್ವಿಯಾಗಿದೆ. ಇದೀಗ ಗಗನನೌಕೆ ಚಂದ್ರನನ್ನ ಸುತ್ತತೊಡಗಿದ್ದು, ನಿಗದಿಯಂತೆ ಕಾರ್ಯ ನಿರ್ವಹಿಸುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಆಗಸ್ಟ್ 23ರಂದು ಚಂದ್ರನ ಮೇಲ್ಮೈ ಅಂಗಳದ ಮೇಲೆ ಲ್ಯಾಂಡರ್ ಲ್ಯಾಂಡ್ ಆಗಲಿದೆ.

ಸದ್ಯ ಚಂದ್ರನ ಗುರುತ್ವಾಕರ್ಷಣೆಯ (Lunar Gravity) ಅನುಭವವಾಗುತ್ತಿದೆ. ಚಂದ್ರಯಾನ-3 ಅನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಲಾಗಿದೆ ಎಂದು ಪೆರಿಲುನ್‌ನಲ್ಲಿ ರೆಟ್ರೋ-ಬರ್ನಿಂಗ್ ಅನ್ನು ಮಿಷನ್ ಆಪರೇಷನ್ಸ್ ಕಾಂಪ್ಲೆಕ್ಸ್‌ನಿಂದ ಕಮಾಂಡಿಂಗ್‌ ಬಂದಿದೆ. ಮುಂದಿನ ಹಂತದಲ್ಲಿ ಕಕ್ಷೆ ಕಡಿತಗೊಳಿಸುವ ಕಾರ್ಯವನ್ನ ಆಗಸ್ಟ್‌ 6ರಂದು ರಾತ್ರಿ 11 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಇಸ್ರೋ ಶನಿವಾರ ಟ್ವೀಟ್‌ ಮೂಲಕ ತಿಳಿಸಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *