
ಸ್ಯಾಂಡಲ್‌ವುಡ್ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂಧ ನಿಧನರಾಗಿದ್ದಾರೆ.
ಅವರು ತಮ್ಮ ಪತಿ ವಿಜಯ್ ಜತೆಗೆ ಬ್ಯಾಂಕಾಕ್‍ಗೆ ತೆರಳಿದ್ದ ವೇಳೆ ಹಾರ್ಟ್ ಅಟ್ಯಾಕ್ ಆಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಅವರಿಗೆ ಜತೆಗೆ ಲೋ ಬಿಪಿ ಕೂಡ ಇದ್ದು ಅದೂ ಕಾರಣ ಎನ್ನಲಾಗಿದೆ.
ಈ ಸುದ್ದಿ ಇಡೀ ಕನ್ನಡ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿಯಾಗಿದ್ದು ದಂಪತಿಗೆ ಇವರಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ಅವರು ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿದ್ದು ವಿಜಯ ರಾಘವೇಂದ್ರ ಅವರನ್ನು 2007, ಆಗಸ್ಟ್ 26 ರಂದು ಪ್ರೀತಿಸಿ ಮದುವೆಯಾಗಿದ್ದರು. ಇವರು 16ನೇ ವಿವಾಹ ವಾರ್ಷಿಕೋತ್ಸವಕ್ಕೆ ಕೇವಲ 19 ದಿನಗಳು ಬಾಕಿ ಇರುವಾಗ ಈ ದುರಂತ ನಡೆದಿದೆ.
