ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ ಯಲ್ಲಿ ಕಾವಲು ಕಾಯುತ್ತಿರುವ ಸೇನಾ ಪಡೆಗಳು ಸೋಮವಾರ ಗಡಿಯಾಚೆಯಿಂದ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದಾರೆ.

ಈ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಂಚ್ : ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ ಯಲ್ಲಿ ಕಾವಲು ಕಾಯುತ್ತಿರುವ ಸೇನಾ ಪಡೆಗಳು ಸೋಮವಾರ ಗಡಿಯಾಚೆಯಿಂದ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದಾರೆ.

ಈ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ದೆಗ್ವಾರ್ ಸೆಕ್ಟರ್ನಲ್ಲಿ ಕೆಲವು ಭಯೋತ್ಪಾದಕರು ಭಾರತದ ಕಡೆಗೆ ನುಸುಳಲು ಪ್ರಯತ್ನಿಸುತ್ತಿರುವುದನ್ನು ಗಮನಿಸಿದ ಭದ್ರತಾ ಪಡೆಗಳು ಎನ್ಕೌಂಟರ್ನಲ್ಲಿ ನಡೆಸಿದ್ದು, ಇಬ್ಬರು ಉಗ್ರರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಆದರೆ ಅವರ ದೇಹವನ್ನು ಘಟನಾ ಸ್ಥಳದಿಂದ ಇನ್ನೂ ಪಡೆಯಲಾಗಿಲ್ಲ ಎಂದು ಅವರು ಹೇಳಿದ್ದಾರೆ.

ಸೇನೆಯ ಹೊಂಚುದಾಳಿ ತಂಡವು ಗರ್ಹಿ ಬೆಟಾಲಿಯನ್ ಪ್ರದೇಶದಲ್ಲಿ ಮುಂಜಾನೆ 2 ಗಂಟೆ ಸುಮಾರಿಗೆ ಭಯೋತ್ಪಾದಕರ ಬಗ್ಗೆ ಸುಳಿವು ಪಡೆದು ಗುಂಡಿನ ಚಕಮಕಿ ನಡೆಸಿರುವುದಾಗಿ ಜಮ್ಮು ಮೂಲದ ರಕ್ಷಣಾ ಪಿಆರ್ಒ ಲೆಫ್ಟಿನೆಂಟ್ ಕರ್ನಲ್ ಸುನೀಲ್ ಬರ್ತ್ವಾಲ್ ತಿಳಿಸಿದ್ದಾರೆ. ಇಡೀ ಪ್ರದೇಶವನ್ನು ಸೇನೆ ಸುತ್ತುವರಿದಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *