
ಆಲೂರು. ತಾಲ್ಲೂಕಿನ ಬೈರಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಾಕನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಗುದ್ದಲಿ ಪೂಜೆ ಕಾರ್ಯಕ್ರಮ ನೆರೆವೇರಿಸಿದ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು.
ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಶುದ್ಧ ಕುಡಿಯುವ ನೀರಿನ ಘಟಕದ ಸ್ಥಾಪನೆಯಿಂದ ಸುಮಾರು 15 ಹಳ್ಳಿಗಳಿಗೆ ಕುಡಿಯುವ ನೀರನ್ನು ಒದಗಿಸಲಾಗುತ್ತದೆ ಹಳ್ಳಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನನ್ನ ಆದ್ಯ ಕರ್ತವ್ಯ ಎಂದರು.
ಈ ಕಾರ್ಯಕ್ರಮದಲ್ಲಿ ಮುಖಂಡರಾದ ಗಣೇಶ್, ಅಜಿತ್ ಲೋಕೇಶ್, ಹನುಮಗೌಡ.ಇನ್ನಿತರ ಸ್ಥಳೀಯ ಮುಖಂಡರು ಇದ್ದರು.




