ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕೋಟ್ಯಂತರ ರು. ಹಣವನ್ನು ವಾಪಸ್ ತೆಗೆದುಕೊಳ್ಳಲು ನೀಡಿರುವ ಆದೇಶದಿಂದಾಗಿ ಕೊಡಗಿನಲ್ಲಿ ಆನೆಗಳ ಚಲನವಲನವನ್ನು ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್ಗಳ ಯೋಜನೆ ಹಠಾತ್ ಸ್ಥಗಿತಗೊಂಡಿದೆ.

ಮಡಿಕೇರಿ: ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕೋಟ್ಯಂತರ ರುಪಾಯಿ ಹಣವನ್ನು ವಾಪಸ್ ತೆಗೆದುಕೊಳ್ಳಲು ನೀಡಿರುವ ಆದೇಶದಿಂದಾಗಿ ಕೊಡಗಿನಲ್ಲಿ ಆನೆಗಳ ಚಲನವಲನವನ್ನು ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್ಗಳ ಯೋಜನೆ ಹಠಾತ್ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಮಾನವ ಕಾಡಾನೆ ಸಂಘರ್ಷ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ನಿಯಂತ್ರಿಸಲು ಬ್ಯಾರಿಕೇಡ್ಗಳನ್ನು ನಿರ್ಮಿಸಲು ಘೋಷಿಸಲಾಗಿತ್ತು.

ಸರ್ಕಾರ ಅನುದಾನ ವಾಪಸ್ ಪಡೆದ ಹಿನ್ನೆಲೆಯಲ್ಲಿ, ಅಧಿಕಾರಿಗಳಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಕೊಡಗು ಜಿಲ್ಲೆ ಜಿಲ್ಲೆಯಾದ್ಯಂತ ಕಾಡು ಆನೆ ಮತ್ತು ಹುಲಿಗಳ ಹಾವಳಿಯಿಂದ ರಕ್ಷಿಸಿಕೊಳ್ಳಲು ಹಿಂದಿನ ಸರ್ಕಾರ ಬ್ಯಾರಿಕೇಡ್ ಯೋಜನೆ ಜಾರಿಗೆ ತಂದಿತ್ತು.ಆದರೆ ಕಾಂಗ್ರೆಸ್ ಸರ್ಕಾರ ಇತ್ತೀಚೆಗೆ ತನ್ನ ಬಜೆಟ್ ನಲ್ಲಿ ಯೋಜನೆಗೆ ಮಂಜೂರಾಗಿದ್ದ ಹಣವನ್ನು ಈಗ ಹಿಂಪಡೆಯಲಾಗಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *