
ಸಕಲೇಶಪುರ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಜ್ಯೋತಿ ಯೋಜನೆಯ ಬಗ್ಗೆ ಸಕಲೇಶಪುರ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಇಂದು ಭೇಟಿ ಮಾಡಿ ಚರ್ಚಿಸಿದ ಸಕಲೇಶಪುರ ತಾಲ್ಲೂಕಿನ ಕಾಂಗ್ರೆಸ್ ಮುಖಂಡರು.
ಯೋಜನೆಯ ಪ್ರಯೋಜನ ಎಲ್ಲರಿಗೂ ದೊರೆಯುವಂತೆ ಮಾಡಲು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವುದಾಗಿ ತಿಳಿಸಿದ ಕಾರ್ಯಪಾಲಕ ಇಂಜಿನಿಯರ್, ಹಾಗು ಕೆಲವೊಂದು ಸಮಸ್ಯೆಗಳ ಬಗ್ಗೆ ತಿಳಿಸಿದಾಗ ತಕ್ಷಣ ಸ್ಪಂದಿಸಿ ಆದಷ್ಟು ಬೇಗ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಕಲೇಶಪುರ ಕಾಂಗ್ರೆಸ್ ಮುಖಂಡರು ಉಪಸ್ತಿತರಿದ್ದರು.


