
ಹೊಳೆನರಸೀಪುರ ತಾಲೂಕಿನ ಮಲ್ಲಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ತ್ಯಾಗರಾಜ್ ಎಂಟಿ (56) ಮೃತ ಉಪನ್ಯಾಸಕ. ಹಳೇಕೋಟೆ ಹೋಬಳಿ, ಹರದನಹಳ್ಳಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತ್ಯಾಗರಾಜ್ ರಾತ್ರಿ ಮನೆಯಲ್ಲಿ ಕುರ್ಚಿ ಮೇಲೆ ಕುಳಿತು ಟಿವಿ ನೋಡುತ್ತಿದ್ದರು.ಈ ವೇಳೆ ಹೃದಯಾಘಾತವಾಗಿ ಅವರು ಕುಳಿತಲ್ಲೇ ಸಾವನ್ನಪ್ಪಿದ್ದಾರೆ. ತ್ಯಾಗರಾಜ್ ಮಾನಸ ಪದವಿ ಪೂರ್ವ ಕಾಲೇಜು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ತ್ಯಾಗರಾಜ್ ನಿಧನಕ್ಕೆ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಂಬನಿ ಮಿಡಿದಿದ್ದಾರೆ.
