ಸಕಲೇಶಪುರ: ತಾಲ್ಲೂಕಿನ ಹೆತ್ತೂರು ಹೋಬಳಿಯ ಕೊಣಬನಹಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕೊಡುಗೆ ನೀಡಿದ ಬಳಿಕ ಮಾತನಾಡಿದ ಪುನೀತ್ ಬನ್ನಹಳ್ಳಿ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು ಎಂದು ಸಮಾಜ ಸೇವಕರು ಹಾಗೂ ಉದ್ಯಮಿಗಳಾದ ಪುನೀತ್ ಬನ್ನ ಹಳ್ಳಿ ಅಭಿಪ್ರಾಯ ಪಟ್ಟರು.

ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ನಾವೆಲ್ಲರೂ ಪ್ರಯತ್ನ ಮಾಡೋಣ ಎಂದು ಹೇಳಿದರು.ಹಳ್ಳಿಯ ಅಭಿವೃದ್ಧಿ ಆದಾಗ ಮಾತ್ರ ನಾವು ಉತ್ತಮ ಸಮಾಜ ರೂಪಿಸಲು ಸಾಧ್ಯ. ಇಲ್ಲ ನಿಟ್ಟಿನಲ್ಲಿ ನಾವೆಲ್ಲರೂ ಪ್ರಯತ್ನ ಮಾಡೋಣ ಎಂದು ಹೇಳಿದರು.

ನಂತರ ಕೊಣಬನಹಳ್ಳಿ ಸರ್ಕಾರಿ ಶಾಲೆ ಮಕ್ಕಳಿಗೆ ಸಮವಸ್ತ್ರ ವಿತರಣೆ ಮಾಡಲಾಯಿತು.ಇದೇ ಸಂದರ್ಭದಲ್ಲಿ ಶಾಲೆಯ ವತಿಯಿಂದ ಪುನೀತ್ ಬನ್ನಹಳ್ಳಿ ರವರಿಗೆ ಶಾಲು, ಹಾರ ಹಾಕುವ ಮೂಲಕ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ನಿವೃತ್ತ ಸೈನಿಕರಾದ ನಂದೀಶ್ ಹೆಚ್ ಡಿ ವಳಲ ಹಳ್ಳಿ, ಹರೀಶ್ ಕರಡಿಗಾಲ, ದೇವರಾಜ್, ಮುಖ್ಯ ಶಿಕ್ಷಕಿ ದೇವಕಿ, ಶಿಕ್ಷಕರಾದ ಕುಮಾರಸ್ವಾಮಿ, ಯೋಗೇಶ್ ಯಸಳೂರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *