
ಅಮೃತ ಮಹೋತ್ಸವದ ಹೊಸ್ತಿಲಲ್ಲಿರುವ ನಾವೆಲ್ಲರೂ 76 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ತಮ್ಮ ಮನೆಗಳು, ಅಂಗಡಿ ಮುಗ್ಗಟ್ಟುಗಳು ಹಾಗೂ ಕಛೇರಿಗಳ ಮೇಲೆ ಇಂದಿನಿಂದ ಮೂರು ದಿನಗಳ ಕಾಲ ತಿರಂಗ ಭಾವುಟವನ್ನು ಹಾರಿಸುವ ಮೂಲಕ ದೇಶಪ್ರೇಮ ಮೆರೆಯಬೇಕು ಎಂದು ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
