
ಸಕಲೇಶಪುರ : ಸಕಲೇಶಪುರ ತಾಲ್ಲೂಕಿನ ಬೆಳಗೂಡು ಹೋಬಳಿಯ ಕುಂಬಾರಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ.
ಸಕಲೇಶಪುರ ರಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ರಾಷ್ಟ್ರೀಯ ಹೆದ್ದಾರಿ 75 ರ ಕುಂಬಾರಕಟ್ಟೆ ಬಳಿ ಕಾರನ್ನು ಹಿಂದಿಕ್ಕಿಲು ಹೋಗಿ ಬೈಕ್ ಗೆ ಗುದ್ದಿದೆ. ಹಿಂದೆ ಬರುತ್ತಿದೆ ಕಾರ್ ನವರು ಬೈಕ್ ನ್ನು ತಪ್ಪಿಸಲು ಹೋಗಿ ಕಾರು ಡಿವೈಡರ್ ಗೆ ಗುದ್ದಿದೆ.ಬೈಕ್ ಸವಾರನಿಗೆ ಗಾಯವಾಗಿದ್ದು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.



