ಬೇಲೂರು : ಶಿಸ್ತಿನ ಜೀವನ ನಡೆಯಲು ಸಲಹೆಜೀವನದಲ್ಲಿ ಶಿಸ್ತು ಮತ್ತು ಸಮಯ ಪ್ರಜ್ಞೆ ಹಾಗೂ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಭಾರತ್ ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತರಾದ ಡಾ. ವೈ ಎಸ್ ವೀರಭದ್ರಪ್ಪ ಕರೆ ನೀಡಿದರು.

ಮುಂದುವರಿದು ಮಾತನಾಡಿದ ಅವರು ಇಂದಿನ ಒತ್ತಡದ ಬದುಕಿನಲ್ಲಿ ತಮ್ಮ ಜೀವಿತಾವಧಿಯಲ್ಲಿ ಒಳ್ಳೆಯ ಕೆಲಸ ಶಾಶ್ವತವಾಗಿ ಉಳಿಯುತ್ತದೆ ಎಂದು ಹೇಳಿದರು.

ಕಾಫಿ ಬೆಳೆಗಾರರ ಸಂಘ ಬೇಲೂರು ತಾಲೂಕು ಅಧ್ಯಕ್ಷ ಅದ್ದೂರಿ ಕುಮಾರ್ ಮಾತನಾಡಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆ ಇಂದಿನ ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಶಿಸ್ತು ಬೆಳೆಸಿಕೊಳ್ಳಲು ಸಾಧ್ಯ ಮತ್ತು ಸಂಸ್ಕಾರ ನೀಡುವಲ್ಲಿ ಸಹಾಯ ಮಾಡುತ್ತದೆ ಮತ್ತು ಹೆಚ್ಚು ವಿದ್ಯಾರ್ಥಿಗಳು ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆ ಸೇರುವಂತೆ ಅಭಿಪ್ರಾಯ ವ್ಯಕ್ತಪಡಿಸಿದರು.

ಅರೇಹಳ್ಳಿಯ ರೋಟರಿ ಶಾಲೆಯಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ತಾಲೂಕ ಮಟ್ಟದ ಒಂದು ದಿನದ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಅರೇಹಳ್ಳಿಯ ರೋಟರಿ ಶಾಲೆಯ ಉಪಾಧ್ಯಕ್ಷ ಡಬ್ಲ್ಯೂ.ಅರ್ ಪಿಂಟೋ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.

ಭಾರತ್ ಸ್ಕೌಟ್ ಮತ್ತು ಗೈಡ್ಸ್ ತಾಲೂಕ ಕಾರ್ಯದರ್ಶಿ ಪರಶುರಾಮ್ ಸಂಸ್ಥೆಯ ವರದಿ ಮತ್ತು ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

ಬೇಲೂರು ರೋಟರಿ ಸಂಸ್ಥೆ ಅಧ್ಯಕ್ಷ ಚಿದನ್ ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಎಸ್ ಬಿ ಪಾಲಾಕ್ಷ ನಿವೃತ್ತ ಕೆ ಎಸ್ ಆರ್ ಟಿ ಸಿ ವ್ಯವಸ್ಥಾಪಕ ಬೈರೇಗೌಡರು ಜಿಲ್ಲಾ ಭಾರತ್ ಸ್ಕೌಟ್ ಮತ್ತು ಗೈಡ್ಸ್ ನಿರ್ದೇಶಕ ಸುರೇಶ್ ಗುರೂಜಿ ಗಂಡೇಹಳ್ಳಿ ಬೆಳೆಗಾರರ ಸಂಘದ ಅಧ್ಯಕ್ಷ ರತನ್ ಹಿರಿಯ ರೋಟರಿಯನ್ ಎನ್ ಎಂ ಜಯದೇವ್ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಪದಾಧಿಕಾರಿಗಳು ಭಾಗವಹಿಸಿದ್ದರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *