
ಸಕಲೇಶಪುರ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಇಂದು ಪಟ್ಟಣದ ಮಾಧರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಧ್ವಜಾರೋಹಣವನ್ನು ಉಪವಿಭಾಗಾಧಿಕಾರಿ ಶೃತಿ ನೆರವೇರಿಸಿದರು,ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಸಿಮೆಂಟ್ ಮಂಜು ವಹಿಸಿದ್ದರು.
ಈ ವೇಳೆ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಅದ್ಯಕ್ಷರಾದ ತಹಸೀಲ್ದಾರ್ ಮೇಘನಾ ಎಎಸ್ಪಿ ಮಿಥುನ್ IPS , ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ರಾಮಕೃಷ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತ, ಪುರಸಭೆ ಮುಖ್ಯಾಧಿಕಾರಿ ಡಾ.ಜಯಣ್ಣ, ಟಿ.ಎ.ಪಿ.ಸಿ.ಎಂ.ಎಸ್.ಅದ್ಯಕ್ಷ ಶಶಿಕುಮಾರ್ , ಶಿರಸ್ತೆದಾರ್ ಉಮೇಶ್, ಪುರಸಭೆ ಸದಸ್ಯರು ಹಾಗೂ ವಿವಿದ ಇಲಾಖೆಯ ಅಧಿಕಾರಿಗಳು ಶಾಲಾ ಶಿಕ್ಷಕರು, ಸಿಬ್ಬಂದಿಗಳು ಇದ್ದರು ವಿವಿಧ ಶಾಲಾ ವಿದ್ಯಾರ್ಥಿಗಳು ದೇಶ ಭಕ್ತಿ ಗೀತೆಗಳಿಗೆ ಆಕರ್ಷಕ ನೃತ್ಯ ಮಾಡಿದರು.



