ಸಕಲೇಶಪುರ :-ಬ್ಯಾಕರವಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾದ ರಂಗನಾಥ್ ಅವರು ತಾವು ಓದಿದ ಇಬ್ಬಡಿ ಸುಳ್ಳಕ್ಕಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ತಮ್ಮ ಸ್ವಂತ ಖರ್ಚಿನಿಂದ ಉತ್ತಮ ರೀತಿಯ ಬಣ್ಣವನ್ನು ಹೊಡಿಸಿಕೊಡುವ ಮೂಲಕ ತಾವು ಓದಿದ ಶಾಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಹಾಗೂ ಸಡಗರದಿಂದ ಆಚರಿಸುವ ಮೂಲಕ ತಮ್ಮ ಕೈಲಾದ ಸೇವೆಯನ್ನು ಸರ್ಕಾರಿ ಶಾಲೆಗೆ ಮಾಡುವ ಜೊತೆಗೆ ಗ್ರಾಮಸ್ಥರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ರಂಗನಾಥ್ ಅವರು ತಮ್ಮ ವಿದ್ಯಾಭ್ಯಾಸವನ್ನು ಇದೇ ಇಬ್ಬಡಿ ಸುಳ್ಳಕ್ಕಿ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಪಾಠಶಾಲೆಯಲ್ಲಿ ಮುಗಿಸಿ ,ರಾಜಕೀಯದಲ್ಲಿ ತನ್ನನ್ನು ತಾನು ಗುರುತಿಸಿಕೊಳ್ಳುವುದರೊಂದಿಗೆ ಮೂರು ಬಾರಿ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಯಾಗಿ ಎರಡು ಬಾರಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಅವರ ಕೆಲಸಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ಕಳೆದ ಎರಡು ಬಾರಿ ಅಧ್ಯಕ್ಷ ಸ್ಥಾನದಲ್ಲಿದ್ದಾಗ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಲ್ಲದೆ ಗ್ರಾಮ ಪಂಚಾಯಿತಿಯ ಅನುದಾನದಲ್ಲಿ ಕುಡಿಯುವ ನೀರು, ಚರಂಡಿ ವ್ಯವಸ್ಥೆ, ವಿದ್ಯುತ್ ವ್ಯವಸ್ಥೆಯಂತಹ ಕೆಲಸಗಳನ್ನು ಮಾಡುವ ಮೂಲಕ ಮಾದರಿ ಗ್ರಾಮ ಪಂಚಾಯಿತಿ ಅಧ್ಯಕ್ಷರೆನಿಸಿಕೊಂಡಿದ್ದರು.

ಇವರು ತಾವು ಓದಿದ ಶಾಲೆಯ ಮುಖ್ಯ ಶಿಕ್ಷಕರು ಕರೆ ಮಾಡುವ ಮೂಲಕ ಗ್ರಾಮ ಪಂಚಾಯಿತಿ ಅನುದಾನದಲ್ಲಿ ತಮ್ಮ ಶಾಲೆಯ ಅಭಿವೃದ್ಧಿಗೆ ಸಂಬಂಧಿಸಿದ ಕೆಲಸವನ್ನು ಮಾಡಿಕೊಡಬೇಕು ಎಂದು ಹೇಳಿದಾಗ ,ಸರ್ಕಾರದಿಂದ ಅಥವಾ ಗ್ರಾಮ ಪಂಚಾಯಿತಿಯಿಂದ ಶಾಲೆಯ ಅಭಿವೃದ್ಧಿಗೆ ಬರುವ ಅನುದಾನದವರೆಗೂ ಕಾಯುವ ಬದಲು ಶೀಘ್ರವಾಗಿ ತನ್ನ ಕೈಲಾದ ಮಟ್ಟಿಗೆ ಏನಾದರೂ ಮಾಡಬಹುದ ಎಂದು ಶಿಕ್ಷಕರೊಡನೆ ಚರ್ಚಿಸಿ, ಸ್ವಾತಂತ್ರ್ಯ ದಿನಾಚರಣೆ ವೇಳೆಗೆ ಶಾಲೆಗೆ ಒಳ್ಳೆಯ ಬಣ್ಣವನ್ನು ಹೊಡೆಸುವ ಮೂಲಕ ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸೋಣ ಎಂದು ಹೇಳಿದರು.

ಅದರಂತೆ ಎರಡು ದಿನಗಳಲ್ಲಿ ಶಾಲೆಗೆ ಉತ್ತಮ ರೀತಿಯ ಬಣ್ಣವನ್ನು ಹೊಡಿಸಿಕೊಡುವ ಮೂಲಕ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶಾಲೆಯಲ್ಲಿ ಮಕ್ಕಳು ಸೇರಿದಂತೆ ಗ್ರಾಮಸ್ಥರು ಸಂಭ್ರಮದಿಂದ ಆಚರಿಸುವ ಮೂಲಕ ಮಾದರಿ ಗ್ರಾಮ ಪಂಚಾಯಿತಿ ಅಧ್ಯಕ್ಷರಿಸಿಕೊಂಡಿದ್ದಾರೆ. ಒಟ್ಟಾರೆ ಈಗಾಗಲೇ ಎರಡು ಬಾರಿ ಅಧ್ಯಕ್ಷರಾಗಿ ಮಾಡಿದ ಅಭಿವೃದ್ಧಿ ಕೆಲಸದ ಜೊತೆಗೆ ನೂತನ ಅಧ್ಯಕ್ಷರಾದ ಕೂಡಲೇ ಮಾಡಿರುವ ಈ ಕೆಲಸಕ್ಕೆ ಗ್ರಾಮ ಪಂಚಾಯಿತಿ ವ್ಯಾಪ್ತಿ ಹಾಗೂ ಇಬ್ಬಡಿ ಸುಳ್ಳಕ್ಕಿ ಗ್ರಾಮಸ್ಥರು ಎಸ್ ಡಿ ಎಂ ಸಿ ಸದಸ್ಯರು ಸೇರಿದಂತೆ ಶಿಕ್ಷಕ ವರ್ಗದವರು ಅಭಿನಂದನೆ ವ್ಯಕ್ತಪಡಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *