
ಸಕಲೇಶಪುರ ತಾಲ್ಲೂಕು ಹೆಗ್ಗದೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಚಿಕ್ಕಬಳ್ಳಾಪುರದ ಯಾತ್ರಿಕರು ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮುಗಿಸಿ ತಮ್ಮ ಊರಿಗೆ ಹೋಗುವ ಸಂದರ್ಭದಲ್ಲಿ ಹೆಗ್ಗದೆ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ಹೋಂಡಾ ಸಿಟಿ ಕಾರ್ ನ ಮುಂಭಾಗ ಸಂಪೂರ್ಣ ಸುಟ್ಟು ಹೋಗಿದ್ದು ಸ್ಥಳಕ್ಕೆ ಸಕಲೇಶಪುರ ಅಗ್ನಿಶಾಮಕ ದಳ ಧಾವಿಸಿ ಬೆಂಕಿ ನಂದಿಸಿದ್ದಾರೆ .
ಈ ಶಾರ್ಟ್ ಸರ್ಕ್ಯೂಟ್ ನಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.




