ಹಾಸನ, ಆಗಸ್ಟ್‌, 18: ಆಟೋ – ಸಾರಿಗೆ (KSRTC) ಬಸ್ ನಡುವೆ ಭೀಕರ ಅಪಘಾತವಾಗಿದ್ದು, ಈ ವೇಳೆ ಆಟೋ ಚಾಲಕ (52) ಸಾವನ್ನಪ್ಪಿರುವ ಘಟನೆ ಹಾಸನದ ಕೆಐಎಡಿಬಿ ಏರಿಯಾದ ಹಾಸನ- ಮೈಸೂರು ರಸ್ತೆಯಲ್ಲಿ ನಡೆದಿದೆ.

ಹಾಸನ- ಮೈಸೂರು ರಸ್ತೆಯಲ್ಲಿ ಆಟೋ – ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತವಾಗಿದೆ. ಇನ್ನು ಬಸ್‌ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಪರಿಣಾಮ ಆಟೋ ಚಾಲಕ ಸ್ಥಳದಲ್ಲೆ ಸಾವನ್ನಪ್ಪಿದ್ದು, ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸಾರಿಗೆ ಬಸ್ ಆಟೋಗೆ ಹಿಂಬದಿಯಿಂದ ಡಿಕ್ಕಿ ಹೊಡೆಯೋ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬಸ್ ಚಾಲಕನ ಅಜಾಗರೂಕತೆಯೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *