ಹಾಸನ: ಹಾಸನದ ಜಿಲ್ಲಾ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪ ಕೇಳಿಬರುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ದೊಡ್ಡ ತಂಡವೇ ಶುಕ್ರವಾರ ರಾತ್ರಿ ದಾಳಿ ಮಾಡಿದೆ.

ಈ ವೇಳೆ ಮೊಬೈಲ್‌, ಗಾಂಜಾ ಸೇರಿದಂತೆ ಹಲವು ಅಪಾಯಕಾರಿ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಹಾಸನ ಎಎಸ್ಪಿ ತಮ್ಮಯ್ಯ ನೇತೃತ್ವದಲ್ಲಿ ಶುಕ್ರವಾರ ಮಧ್ಯರಾತ್ರಿ ದಿಢೀರ್ ದಾಳಿ ನಡೆಸಲಾಗಿದೆ. ಸುಮಾರು 60 ಜನ ಪೊಲೀಸರ ಏಕಾಏಕಿಯಾಗಿ ಜೈಲಿಗೆ ನುಗ್ಗಿದೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ನಡೆದ ದಾಳಿ ವೇಳೆ 17 ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಜತೆಗೆ ಗಾಂಜಾ, ಬೀಡಿ, ಸಿಗರೇಟ್ ಸೇರಿದಂತೆ ಇನ್ನಿತರ ಮಾದಕ ವಸ್ತುಗಳು ಸಿಕ್ಕಿವೆ.ಈ ಜೈಲಿಗೆ ಹೊರಗಡೆಯಿಂದ ಮಾದಕ ವಸ್ತುಗಳು ಪೂರೈಕೆಯಾಗುತ್ತಿವೆ. ಜತೆಗೆ ಜೈಲಿನ ಒಳಗಿದ್ದವರು ಹೊರಗಿನ ವ್ಯಕ್ತಿಗಳ ಜತೆಗೆ ಸಂಪರ್ಕ ಸಾಧಿಸಲು ಮೊಬೈಲ್‌ ವ್ಯವಸ್ಥೆಯೂ ಇದೆ.

ಹಣ ಕೊಟ್ಟರೆ ಮನೆಯವರಿಗೆ ಕೈದಿಗಳ ಜತೆ ಮುಕ್ತವಾಗಿ ಮಾತನಾಡಲು ಅವಕಾಶ ಸಿಗುತ್ತದೆ ಎಂಬೆಲ್ಲ ಆರೋಪಗಳು ಕೇಳಿಬಂದಿದ್ದವು.ಆರೋಪಿಗಳ ಚಟುವಟಿಕೆ ಗಮನಿಸಿ ಖಚಿತ ಮಹಿತಿಯೊಂದಿಗೆ ದಿಢೀರ್ ದಾಳಿ ನಡೆಸಿದ ಪೊಲೀಸರು ಅಲ್ಲಿಂದ ಹಲವು ವಸ್ತುಗಳನ್ನು ಹಿಡಿದುಕೊಂಡು ಬಂದಿದ್ದಾರೆ.

ಹಾಸನ ನಗರದ ಬಿಎಂ ರಸ್ತೆಯಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಎಸ್ಪಿ ಹರಿರಾಮ್ ಶಂಕರ್ ಮಾರ್ಗದರ್ಶನದಲ್ಲಿ ಪೊಲೀಸರ ದಾಳಿ ನಡೆದಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *