ಸಕಲೇಶಪುರ : ದಿನಾಂಕ 18.8.2023 ರಂದು ಬಾಳ್ಳುಪೇಟೆ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಸಾ. ಹಿ. ಪ್ರಾ. ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದ ಮಾತನಾಡಿದ ಶಾಸಕರಾದ ಸಿಮೆಂಟ್ ಮಂಜುರವರು ಮಕ್ಕಳು ಓದಿನಲ್ಲಿ ಅಧ್ಯಯನದಲ್ಲಿ ಆಸಕ್ತಿ ಹೊಂದುವುದರ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸುವುದು ಶಿಕ್ಷಕರ ಕರ್ತವ್ಯ ವಾಗಿರುತ್ತದೆ.

ಬಾಲ್ಯದಲ್ಲಿಯೇ ಮಕ್ಕಳ ಆಸಕ್ತಿಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಶಿಕ್ಷಕ ಮತ್ತು ಪೋಷಕರ ಜವಾಬ್ದಾರಿ ಆಗಿರುತ್ತದೆ. ಮತ್ತು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪ, ತಾಲೂಕು ದೈಹಿಕ ಪರಿವೀಕ್ಷಕರು ಕುಶ್ವಂತ್, ಪತ್ರಕರ್ತರಾದ ಸುದೀರ್ ಭಟ್, ಪ್ರದೀಪ್ ಇನ್ನಿತರರು ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *